ಮಂಡ್ಯ-ಜಿಲ್ಲಾ ಉಸ್ತುವಾರಿ ಸಚಿವರಿಂದ ವಿವಿಧ ಸವಲತ್ತು ವಿತರಣೆ

ಮಂಡ್ಯ- ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಿದರು.

50 ಸಾಧನ ಸಲಕರಣೆ ವಿತರಣೆ
ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗೆ ಯಂತ್ರ ಚಾಲಿತ ತ್ರಿಚಕ್ರ ವಾಹನ-13, ಬ್ಯಾಟರಿ ಚಾಲಿತ ವೀಲ್ ಚೇರ್- 11, ಶ್ರವಣ ಸಾಧನ- 15, ವೀಲ್ ಚೇರ್- 04, ಟ್ರೈಸೈಕಲ್-02, ಕ್ರಚಸ್೯-04 ಹಾಗೂ ವಾಕರ್- 02 ಒಟ್ಟು 50 ವಿಶೇಷಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಿ ಸಾಧನ ಸಲಕರಣೆಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.

ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಗೆ ಎಂ.ಎಂ.ಯು ಕಟ್ಟಡ ಕಾರ್ಮಿಕರು ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ನೀಡಲು ಮೂರು ಮೊಬೈಲ್ ಮೆಡಿಕಲ್ ಯುನಿಟ್ ವಾಹನಗಳು ಜಿಲ್ಲೆಗೆ ಮಂಜೂರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಿದರು.

ಸದರಿ ವಾಹನದಲ್ಲಿ ಓರ್ವ ವೈದ್ಯರು, ಜಿ.ಎನ್.ಎಂ, ಎ.ಎನ್.ಎಂ, ಲ್ಯಾಬ್ ಟೆಕ್ನಿಷಿಯನ್, ಸಹಾಯಕರು ಹಾಗೂ ವಾಹನ ಚಾಲಕರು ಒಟ್ಟು 6 ಜನರು ಕಾರ್ಯನಿರ್ವಹಿಸಲಿದ್ದಾರೆ. ಕಟ್ಟಡ ಕಾರ್ಮಿಕರು ಹೆಚ್ಚಿರುವ ಸ್ಥಳ ಅಥವಾ ಇಲಾಖೆ ನೀಡುವ ರೂಟ್ವಮ್ಯಾಪ್ ನಂತೆ ಸಂಚರಿಸಿ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ‌ ಕೆಲಸಗಳನ್ನು ನಿರ್ವಹಿಸಲಿದೆ.

ಗ್ರಂಥಾಲಯಗಳಿಗೆ ಪುಸ್ತಕ ವಿತರಣೆ ಸರ್ಕಾರ ಮಕ್ಕಳು ಹಾಗೂ ಸಾರ್ವಜನಿಕರಲ್ಲಿ ಜ್ಞಾನಾರ್ಜನೆಯನ್ನು ಹೆಚ್ಚಿಸಬೇಕು ಎಂದು ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ 255 ಗ್ರಾಮಗಳಲ್ಲಿ ಗ್ರಂಥಾಲಯವನ್ನು ಪ್ರಾರಂಭಿಸಿದ್ದು, ಇಂದು ಸಚಿವರು ಹೆಚ್ಚುವರಿ 255 ಗ್ರಂಥಾಲಯಗಳಿಗೆ ಪ್ರತಿ ಗ್ರಂಥಾಲಯಕ್ಕೆ 2 ಲಕ್ಷ ರೂ ವೆಚ್ಚದ ಪುಸ್ತಕಗಳನ್ನು ಸಾಂಕೇತಿವಾಗಿ ವಿತರಿಸಿದರು.

101 ,ಆ್ಯಂಡರಾಯ್ಡ್ ಪಿ.ಓ‌‌.ಎಸ್ ಯಂತ್ರ ವಿತರಣೆ ಗ್ರಾಮ ಪಂಚಾಯಿತಿಗಳಲ್ಲಿ ಕರ ಸಂಗ್ರಹಣೆಗಾಗಿ ಉಪಯೋಗಿಸುವ 101 ಪಿ.ಒ.ಎಸ್ ಯಂತ್ರವನ್ನು ಜಿಲ್ಲಾ ಪಂಚಾಯತ್ ವತಿಯಿಂದ ಖರೀದಿಸಿದ್ದು, ಅವುಗಳನ್ನು ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಸಚಿವರು ವಿತರಿಸಿ, ಬಿಲ್ ಕಲೆಕ್ಟರ್ ಗಳು ಯಂತ್ರವನ್ನು ವ್ಯವಸ್ಥಿತವಾಗಿ ಉಪಯೋಗಿಸಬೇಕು ಎಂದರು.

ಮಾವು ಮೇಳ ಪೋಸ್ಟರ್ ಬಿಡುಗಡೆ ತೋಟಗಾರಿಕೆ ಇಲಾಖೆ ವತಿಯಿಂದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಮುಂಭಾಗದಲ್ಲಿ ಮೇ 26 ರಿಂದ 28 ರವರೆಗೆ ಮಾವು ಮತ್ತು ಹಲಸು ಮೇಳ ಹಾಗೂ ಸಸ್ಯ ಸಂತೆ- 2025 ನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಪೋಸ್ಟರ್ ಬಿಡುಗಡೆ ಮಾಡಿದರು.

ಈ ಮೇಳದಲ್ಲಿ ನೈಸರ್ಗಿಕವಾಗಿ ಮಾಗಿಸಿದ ಕಾರ್ಬೈಡ್ ಮುಕ್ತ ಮಾವು ಮತ್ತು ಹಲಸು ಮಾರಾಟ ಹಾಗೂ ರೈತರಿಂದ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲಾಗುವುದು.

ಇದೇ ಸಂದರ್ಭದಲ್ಲಿ ಸಚಿವರು ಮಾತನಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಯೋಜನೆಗಳ ಬಗ್ಗೆ ಸದರಿ ಸಾಲಿನಲ್ಲಿ ವಿಶೇಷ ನಿಗಾ ವಹಿಸಲಾಗುವುದು. ಪ್ರತಿವಾರ ಜಿಲ್ಲಾ‌ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ವರದಿ ಪಡೆಯಲಾಗುವುದು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಿಗದಿಪಡಿಸೊರುವ ಗುರಿಯನ್ನು ಶೇ100 ರಷ್ಟು ಸಾಧನೆ ಮಾಡಲು ಕಾರ್ಯಪ್ರವೃತ್ತರಾಗಬೇಕು ಎಂದರು.

ಮಳೆಗಾಲ ಪ್ರಾರಂಭವಾಗಿದ್ದು, ಯಾವುದೇ ಮಳೆ ಹಾನಿ ಅವಘಡವಾಗದಂತೆ ಮುನ್ನೆಚ್ಚರಿಕೆ ‌ವಹಿಸಿ. ಕೇಂದ್ರ ಸ್ಥಾನದಲ್ಲಿ ವಾಸ್ತವ್ಯ ಹೂಡಿ ಸಾರ್ವಜನಿಕರ ಕಷ್ಟಗಳಿಗೆ ಸ್ಪಂದಿಸಿ ಎಂದರು.

ಕಾರ್ಯಕ್ರಮದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ‌ ಪಿ.ರವಿ ಕುಮಾರ್, ಜಿಲ್ಲಾಧಿಕಾರಿ ಡಾ; ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರೀ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *