ಮಂಡ್ಯ:- ಜಿಲ್ಲಾ ಖಜಾನೆಯಿಂದ ವೈರಮುಡಿ ಹೊರಟು ಮೊದಲಿಗೆ ಲಕ್ಷ್ಮಿ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ರಾಜಮುಡಿ ಹಾಗೂ ವೈರಮುಡಿಗೆ ಪೂಜೆಯನ್ನು ಸಲ್ಲಿಸಿ ಮೆರವಣಿಗೆಯ ಮೂಲಕ ಮೇಲೂಕೋಟೆ ಶ್ರೀ ಚಲುವನಾರಾಯಣಸ್ವಾಮಿ ದೇವಾಲಯವನ್ನು ತಲುಪುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು.
ಇಂದು (ಏ.7) ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಖಜಾನೆಯಲ್ಲಿ ವೈರಮುಡಿ ಹಾಗೂ ರಾಜಮುಡಿಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು ಬಿಗಿ ಬಂದೋಬಸ್ತ್ ನೊಂದಿಗೆ ಸುಮಾರು 13ಕ್ಕೂ ಹೆಚ್ಚಿನ ಗ್ರಾಮಗಳಲ್ಲಿ ವೈರಾಮುಡಿ ಮೆರವಣಿಗೆಯ ಮೂಲಕ ಹಾದುಹೊಗಲಿದ್ದು ಅಲ್ಲಿನ ಭಕ್ತಾದಿಗಳಿಗೆ ಪೂಜೆ ಸಲ್ಲಿಸಲ್ಲೂ ಅವಕಾಶ ಕಲ್ಪಿಸಿಲಾಗಿದೆ. ಸಂಜೆ 4:30 ಗಂಟೆಗೆ ವೈರಾಮುಡಿಯು ಮೇಲುಕೋಟೆ ದೇವಾಲಯ ತಲುಪಲಿದ್ದು 6 ಗಂಟೆಗೆ ಪರ್ಕಾವಣೆ ಪ್ರಾರಂಭಿಸಿ ಸರಿ ಸುಮಾರು 8 ಗಂಟೆಗೆ ವೈರಮುಡಿ ಉತ್ಸವವು ವಿಜೃಂಭಣೆಯಿಂದ ಜರುಗಲಿದೆ ಎಂದು ಹೇಳಿದರು.
ಈಗಾಗಲೇ ಪೂರ್ವ ಸಿದ್ಧತೆ ನಡೆಸಲಾಗಿದೆ ಭಕ್ತಾದಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ಹಾಗೂ ಪತ್ರಿಕಾಗೋಷ್ಠಿಯನ್ನು ನಡೆಸಿದ್ದು, ಎರಡು ಬಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ವೀಕ್ಷಣೆಯನ್ನು ಸಹ ನಡೆಸಲಾಗಿದೆ ಭಕ್ತಾದಿಗಳಿಗೆ ಯಾವುದೇ ರೀತಿಯ ಅನಾನುಕೂಲಗಳು ಆಗುವುದಿಲ್ಲ ಎಂದರು.
ಸುಮಾರು 6 ತಿಂಗಳಿAದ ದೇವಸ್ಥಾನದ ವತಿಯಿಂದ ಅನ್ನ ದಾಸೋಹ ಪ್ರಾರಂಭವಾಗಿದೆ. ಈ ಬಾರಿ ಮೊದಲನೇ ಬಾರಿಗೆ ವೈರಾಮುಡಿ ಉತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳಿಗೆ ದಿನದ 24 ಗಂಟೆಯವರೆಗೆ ಅನ್ನ ದಾಸೋಹ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದರು.

ಯಾವುದೇ ಅಹಿತಕರ ಘಟನೆ ಜರುಗದಿರಲು 40 ಕ್ಕೂ ಹೆಚ್ಚಿನ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, ಬೆಂಗಳೂರು, ಮೈಸೂರು ಹಾಗೂ ಸುತ್ತಮುತ್ತಲಿನ ಪ್ರದೇಶದಿಂದ ಆಗಮಿಸುವ ಭಕ್ತಾದಿಗಳಿಗಾಗಿ 150 ಕ್ಕೂ ಹೆಚ್ಚಿನ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಸುಮಾರು 1 ವರೆ ಲಕ್ಷಕ್ಕೂ ಹೆಚ್ಚಿನ ಭಕ್ತಾದಿಗಳು ಬರುವ ನಿರೀಕ್ಷೆಯಿದ್ದು, ಪಾರ್ಕಿಂಗ್ ಸ್ಥಳದಿಂದ ದೇವಸ್ಥಾನವರೆಗೆ ವಯಸ್ಸಾದವರಿಗೆ ಸಂಚರಿಸಲು ಅನುಕೂಲವಾಗಲು 10 ಬಸ್ಸುಗಳ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ. ಸುಮಾರು 1200 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಿ ಎಲ್ಲಾ ನಿಟ್ಟಿನಲ್ಲೂ ಭದ್ರತ ವ್ಯವಸ್ಥೆ ಮಾಡಲಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿಯವರು ಮಾತನಾಡಿ ಏಪ್ರಿಲ್ 2 ರಿಂದ ಬ್ರಹ್ಮೋತ್ಸವದ ಕಾರ್ಯಕ್ರಮಗಳು ಪ್ರಾರಂಭವಾಗಿದ್ದು ಜಿಲ್ಲಾಡಳಿತದ ಸಹಯೋಗದೊಂದಿಗೆ ಬ್ರಹ್ಮೋತ್ಸವದ ಪ್ರಾರಂಭದಿಂದ ಮುಕ್ತಾಯದವರೆಗೂ ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಿಲಾಗಿದೆ ಎಂದರು.

ಇAದು 13 ಗ್ರಾಮಗಳಲ್ಲಿ ಹಾದುಹೋಗಲಿರುವ ವೈರಮುಡಿ ಮೆರವಣಿಗೆಯಲ್ಲೂ ಬಿಗಿ ಬಂದೋಬಸ್ತ್ ಮಾಡಲಾಗಿದ್ದು,
ಭಕ್ತಾದಿಗಳಿಗಾಗಿ ಸೂಕ್ತ ದರ್ಶನ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಬಿ. ಸಿ ಶಿವಾನಂದಮೂರ್ತಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ. ಆರ್ ನಂದಿನಿ ಹಾಗೂ ಪಾಂಡವಪುರ ಉಪವಿಭಾಗ ಅಧಿಕಾರಿ ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.