ಮಂಡ್ಯ-ಕಡು-ಬಡವರಿಗೂ-ಗ್ಯಾರಂಟಿಗಳು-ತಲುಪಿದಾಗ-ಮಾತ್ರ-ಯೋಜನೆಗಳು-ಯಶಸ್ವಿಯಾದಂತೆ-ಚಿಕ್ಕಲಿಂಗಯ್ಯ


ಮಂಡ್ಯ:- 
ಘನ ಸರ್ಕಾರದ ಕನಸಿನ ಕೂಸಾದ ಗ್ಯಾರಂಟಿ ಯೋಜನೆಗಳು ರಾಜ್ಯದ ಕಡು ಬಡವರ ಮನೆಯನ್ನು ತಲುಪಿದಾಗ ಮಾತ್ರ ಯೋಜನೆ ಯಶಸ್ವಿಯಾದಂತೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ ಹೇಳಿದರು.

ಇಂದು (ಮಾ.27) ಜಿಲ್ಲಾ ಪಂಚಾಯತ್ನಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಅರ್ಹ ಫಲಾನುಭವಿಗಳಿಗೆ ಯೋಜನೆಗಳನ್ನು ತಲುಪಿಸಲು ಪ್ರಾಧಿಕಾರವು ಸಹ ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದೆ.

ಗ್ಯಾರಂಟಿ ಯೋಜನೆಯ ಪ್ರಮುಖ ಯೋಜನೆ ಗೃಹಲಕ್ಷಿ ಯೋಜನೆ, ಈ ಯೋಜನೆಯಿಂದ ರಾಜ್ಯದ ಅನೇಕ ಕುಟುಂಬಗಳು ಸಬಲವಾಗಿವೆ, ಜಿಲ್ಲೆಯಲ್ಲಿ ಶೇ 100 ರಷ್ಟು ಅರ್ಹ ಮಹಿಳೆಯರಿಗೆ ಯೋಜನೆಗಳನ್ನು ತಲುಪಿಸುವುದು ಅತಿ ಮುಖ್ಯ, ಈಗಾಗಲೇ ಡಿಸೆಂಬರ್ ಮಾಹೆಯವರೆಗೂ ಗೃಹ ಲಕ್ಷ್ಮಿ ಯೋಜನೆಯಡಿ ಅನುದಾನ ಮಂಜೂರು ಮಾಡಲಾಗಿದೆ ಹಾಗೂ ಡಿ ಬಿ ಟಿ ಯ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿದೆ ಎಂದರು.

ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರೊಂದಿಗೆ ಚರ್ಚಿಸಿ ಕಾಲ ಕಾಲಕ್ಕೆ ಗೃಹಲಕ್ಷಿ ಹಣವನ್ನು ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಹಾಗೂ ಅರ್ಹ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗದAತೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

 ಜಿಲ್ಲೆಯಲ್ಲಿ ಅನ್ನ ಭಾಗ್ಯ ಯೋಜನೆಯಡಿ 7 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿದ್ದೂ ಡಿಸೆಂಬರ್ ಮಾಹೆಯವರೆಗೆ ಒಟ್ಟು ರೂ. 402 ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ, ಡಿಸೆಂಬರ್ ಮಾಹೆಗೆ ಸಂಬAಧಿಸಿದAತೆ ರೂ. 23.06 ಕೋಟಿ ಹಣವನ್ನು ಪಡಿತರ ಚೀಟಿಯ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ, ಸರ್ಕಾರದ ನಿರ್ದೇಶನದಂತೆ ಫೆಬ್ರವರಿ ಮಾಹೆಯಿಂದ ಹಣದ ಬದಲು 15 ಕೆ.ಜಿ ಅಕ್ಕಿಯನ್ನೇ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲೆಡೆ ಈಗಾಗಲೇ ಫೆಬ್ರವರಿ ಮಾಹೆಯ ಹೆಚ್ಚುವರಿ ಅಕ್ಕಿಯನ್ನು ವಿತರಿಸಲಾಗುತ್ತಿದೆ, ಪ್ರತಿ ಎರಡು ವರ್ಷಕ್ಕೊಮ್ಮೆ ತೂಕ ಮೌಲ್ಯ ಮಾಪನ ನಡೆಸಲಾಗುವುದು, ತೂಕದಲ್ಲಿ ವ್ಯತ್ಯಾಸ ಕಂಡು ಬಂದ ಅಂಗಡಿಯ ಮಾಲೀಕನ ಮೇಲೆ ಕ್ರಮ ಜರುಗಿಸಲಾಗುವುದು, ಜಿಲ್ಲೆಯಲ್ಲಿ ಅನೇಕ ಕಡೆ ನ್ಯಾಯಬೆಲೆ ಅಂಗಡಿ ಮಾಲೀಕರು ಹಣ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ, ಅಧಿಕಾರಿಗಳು ಈಗಾಗಲೇ ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ ಹಣ ವಸೂಲಿ ಮಾಡದಂತೆ ಸೂಚನೆ ನೀಡಿದ್ದಾರೆ, ಅದನ್ನು ಮೀರಿ ಹಣ ವಸೂಲಿ ಮಾಡಿದರೆ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಶಾಲಾ ಕಾಲೇಜು ಮಕ್ಕಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ಮಕ್ಕಳಿಗೆ ತೊಂದರೆಯಾಗದAತೆ ಬಸ್ ವ್ಯವಸ್ಥೆ ಕಲ್ಪಿಸಿ,
ಶಕ್ತಿ ಯೋಜನೆಯಡಿ ಫೆಬ್ರವರಿ ಮಾಹೆಯಲ್ಲಿ ಪ್ರತಿದಿನದ ಸರಾಸರಿಯಂತೆ 29 ಸಾವಿರಕ್ಕೂ ಹೆಚ್ಚು ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರ ವಿತರಿಸಲಾಗಿದೆ, ಫೆಬ್ರವರಿ ಮಾಹೆಯಲ್ಲಿ 59.13 ಲಕ್ಷಕ್ಕೂ ಹೆಚ್ಚು ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರಿಗೆ ಶಕ್ತಿ ಯೋಜನೆಯಡಿ ನೀಡಲಾಗಿದೆ ಎಂದರು.

ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 5 ಲಕ್ಷದ 49 ಸಾವಿರಕ್ಕೂ ಹೆಚ್ಚಿನ ಫಲಾನುಭವಿಗಳು ಇದ್ದು, ಈವರೆಗೂ ಜಿಲ್ಲೆಗೆ 314 ಕೋಟಿ ಅನುದಾನ ನೀಡಲಾಗಿದೆ, ಜಿಲ್ಲೆಯಲ್ಲಿ ಶೇ 97 ರಷ್ಟು ಪ್ರಮಾಣದಲ್ಲಿ ಗೃಹ ಜ್ಯೋತಿ ಅನ್ನು ಎಲ್ಲಾ ಮನೆಗಳಿಗೂ ತಲುಪಿಸಲಾಗಿದೆ ಎಂದು ಹೇಳಿದರು.

 ಜಿಲ್ಲೆಯ 7 ತಾಲ್ಲೂಕಿನ ಎಲ್ಲಾ ಪದವಿ ಹಾಗೂ ಡಿಪ್ಲೋಮೋ ಕಾಲೇಜುಗಳಲ್ಲಿ ಯುವ ನಿಧಿ ಯೋಜನೆಯ ಕುರಿತು ಜಾಗೃತಿ ಮೂಡಿಸಲಾಗಿದೆ, 4702 ಅರ್ಹ ಫಲಾನುಭವಿಗಳು ಪ್ರಸ್ತುತ ಜಿಲ್ಲೆಯಲ್ಲಿದ್ದು ಎಲ್ಲರಿಗೂ ಡಿ.ಬಿ.ಟಿ ಯ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿದೆ, ಯುವನಿಧಿ ಯೋಜನೆಯಡಿ 7 ಕೋಟಿ 12 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಧನುಷ್, ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷ ಪ್ರಶಾಂತ್ ಬಾಬು ಕೆ.ಸಿ. ಗ್ಯಾರಂಟಿ ಯೋಜನೆಯ ಪ್ರಾಧಿಕಾರದ ಸದಸ್ಯರಾದ ವೀಣಾ ಶಂಕರ್, ರುದ್ರಪ್ಪ, ಮಹೇಶ್, ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣ ಕುಮಾರ್, ಕೆ.ಎಸ್. ಆರ್. ಟಿ.ಸಿ ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

× How can I help you?