ಮೂಡಿಗೆರೆ:ಮಂಡ್ಯದಲ್ಲಿ ಡಿ.20 ರಿಂದ 22ರವರೆಗೆ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಿರುವುದನ್ನು ಮೂಡಿಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತಿಸುತ್ತದೆ ಎಂದು ಕಸಾಪ ಅಧ್ಯಕ್ಷ ಲಕ್ಷ್ಮಣಗೌಡ ಹೇಳಿದರು.
ಅವರು ಮಂಗಳವಾರ ತಾಲೂಕು ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಗೊ.ರು. ಚನ್ನಬಸಪ್ಪ ಅವರು ನಮ್ಮ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನವರಾಗಿದ್ದು, ಕನ್ನಡದ ಹಿರಿಯ ಸಾಹಿತಿಯಾಗಿ ಗುರುತಿಸಿ ಕೊಂಡಿರುವುದು ಅತ್ಯಂತ ಹೆಮ್ಮೆಯ ಸಂಗತಿ.
ಗೊ.ರು. ಚನ್ನಬಸಪ್ಪ ಅವರು ಅನೇಕ ಮಹತ್ವದ ಕೃತಿಗಳನ್ನು ರಚಿಸಿದ್ದು, ಅವರು ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ಎಲೆಮರೆಯ ಕಾಯಿಯಂತೆ ಕನ್ನಡ ಸೇವೆ ಮಾಡಿದ್ದಾರೆ. ಇಂತಹ ಮಹನೀಯರನ್ನು ಗುರುತಿಸಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯ ಕ್ಷರನ್ನಾಗಿ ಆಯ್ಕೆ ಮಾಡಿರುವ ರಾಜ್ಯ ಕಸಾಪ ಘಟಕದ ಕಾರ್ಯ ಶ್ಲಾಘನೀಯ. ಇದು ಚಿಕ್ಕಮಗಳೂರು ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ಸುಚಿತ್ರ ಪ್ರಸನ್ನ, ಬಿ.ಪಿ.ಪ್ರಕಾಶ್ ಬಕ್ಕಿ, ಗೌರವ ಸಂಚಾಲಕ ಎಂ.ಎಸ್. ನಾಗರಾಜ್, ಬಕ್ಕಿ ರವಿ, ನವೀನ್ ಆನೆದಿಬ್ಬ ಮತ್ತಿತರರಿದ್ದರು.
————–—–ವಿಜಯ್ ಕುಮಾರ್ ಟಿ