ತಿಪಟೂರು-ಪಟ್ಟಣಕ್ಕೆ-ನೀರು-ಸರಬರಾಜು-ಯೋಜನೆ- ಸಂಬಂಧಿಸಿದಂತೆ-ಸಚಿವರ-ನೇತೃತ್ವದಲ್ಲಿ-ಸಭೆ


ಬೆಂಗಳೂರು : ತುಮಕೂರು ಜಿಲ್ಲೆಯ ತಿಪಟೂರು ಪಟ್ಟಣಕ್ಕೆ 24/7 ಸುಧಾರಿತ ನೀರು ಸರಬರಾಜು ಯೋಜನೆಗೆ ಸಂಬಂಧಿಸಿದಂತೆ ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ(ಬೈರತಿ) ಹಾಗೂ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರ ನೇತೃತ್ವದಲ್ಲಿ ಬುಧವಾರ ಸಭೆ ಜರುಗಿತು.


ಈ ಸಂದರ್ಭದಲ್ಲಿ ತಿಪಟೂರು ಶಾಸಕ ಕೆ. ಷಾಡಾಕ್ಷರಿ, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪ ಚೋಳನ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಡಾ: ಆರ್. ಸೆಲ್ವಮಣಿ, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

× How can I help you?