ಮೈಸೂರು- ಚಾಮುಂಡಿ ಬೆಟ್ಟದಲ್ಲಿ-100 ಎಕರೆಗೂ ಅರಣ್ಯ- ಪ್ರದೇಶ-ಬೆಂಕಿಗಾಹುತಿ- ಈ ಕೃತ್ಯಕ್ಕೆ ಕಾರಣರಾದವರನ್ನು ಬಂಧಿಸಿ-ಸೂಕ್ತ ಕಾನೂನು ಕ್ರಮಕೈಗೊಳ್ಳಿ-ಕರ್ನಾಟಕ ಸೇನಾ ಪಡೆಯಿಂದ-ಆಗ್ರಹ

ಮೈಸೂರು- ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಕಿಡಿಗೇಡಿಗಳ ದೃಷ್ ಕೃತ್ಯದಿಂದ 100 ಎಕರೆಗೂ ಅರಣ್ಯ ಪ್ರದೇಶ ನಾಶವಾಗಿರುವುದನ್ನು ಖಂಡಿಸಿ ಹಾಗೂ ಈ ಕೂಡಲೇ ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಇಂದು ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಕರ್ನಾಟಕ ಸೇನಾ ಪಡೆ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.

ಈ ವೇಳೆ ಮಾಧ್ಜಿಯಮದೊಂದಿಗೆ ಮಾತನಾಡಿದ ಕರ್ನಾಟಕ ಸೇನಾ ಪಡೆ ಸದಸ್ಯರು, ಜಿಲ್ಲಾಡಳಿತ ಈ ಕೂಡಲೇ 100 ಎಕರೆ ಪ್ರದೇಶದಲ್ಲಿ ಎರಡು ಪಟ್ಟು, ಗಿಡ ಮರಗಳನ್ನು ನೆಡಬೇಕು, ಜತೆಗೆ ಇವುಗಳನ್ನು ಸಂರಕ್ಷಣೆ ಮಾಡಬೇಕು. ಹೆಚ್ಚು ಹೆಚ್ಚು ಅರಳಿ ಮರಗ‌ಳನ್ನು ನೆಡಬೇಕು.

ನಿನ್ನೆ ನಡೆದ ಈ ಘಟನೆಯನ್ನು ಸರ್ಕಾರ ತೀವ್ರವಾಗಿ ಪರಿಗಣಿಸಿ ಚಾಮುಂಡೇಶ್ವರಿ ಬೆಟ್ಟಕ್ಕೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಪ್ರತಿ ದಿನ ಪೋಲೀಸ್ ಜೀಪು ಎರಡು- ಮೂರು ಬಾರಿ ಚಾಮುಂಡಿ ಬೆಟ್ಟ ಗಸ್ತು ತಿರುಗುವ ವ್ಯವಸ್ಥೆ ಮಾಡಬೇಕು .ಈ ರೀತಿ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆ ನೇತೃತ್ವವನ್ನು ತೇಜೇಶ್ ಲೋಕೇಶ್ ಗೌಡ ವಹಿಸಿ ಕೃಷ್ಣಪ್ಪ, ಪ್ರಭುಶಂಕರ್, ಪ್ರಜೀಶ್, ಶಿವಲಿಂಗಯ್ಯ, ನೇಹಾ, ವರಕೂಡು ಕೃಷ್ಣೇಗೌಡ, ಸಿಂದುವಳ್ಳಿ ಶಿವಕುಮಾರ್, ಬೋಗಾದಿ ಸಿದ್ದೇಗೌಡ, ಸುನೀಲ್ ಕುಮಾರ್, ಎಳನೀರು ರಾಮಣ್ಣ, ಬಸವರಾಜು, ಮಂಜುಳಾ, ನಾಗರಾಜು, ಕುಮಾರ್ ಗೌಡ, ರಘು ಅರಸ್, ಗೀತಾ ಗೌಡ, ದರ್ಶನ್ ಗೌಡ, ಪ್ರಭಾಕರ್, ಸುಬ್ಬೇಗೌಡ, ಅಕ್ಬರ್, ಸ್ವಾಮಿ ಗೌಡ, ಭಾಗ್ಯಮ್ಮ , ರವೀಶ್, ಪರಿಸರ ಚಂದ್ರು, ವಿಷ್ಣು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

× How can I help you?