ಮೈಸೂರು-ಶಿಕ್ಷಣ-ಎನ್ನುವುದು-ಪ್ರತಿಯೊಂದು-ಮಗುವಿಗೆ-ಸಿಗಬೇಕಾದ -ಮೂಲಭೂತ-ಹಕ್ಕು-ಟಿ.ಎಸ್.ಶ್ರೀವತ್ಸ

ಮೈಸೂರು– ಶಿಕ್ಷಣ ಎನ್ನುವುದು ಪ್ರತಿಯೊಂದು ಮಗುವಿಗೆ ಸಿಗಬೇಕಾದ ಮೂಲಭೂತ ಹಕ್ಕು ಎಂದು ಶಾಸಕರಾದ ಟಿ ಎಸ್ ಶ್ರೀವತ್ಸ ಹೇಳಿದರು.

ಅವರು, ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ, ಸಾಮೂಹಿಕ ಅಕ್ಷರಭ್ಯಾಸದಲ್ಲಿ ಪಾಲ್ಗೊಂಡು ಮಾತನಾಡಿ, ಸಾಮೂಹಿಕ ವಿವಾಹವನ್ನ ಸರಳ ರೀತಿಯಲ್ಲಿ ಸರ್ಕಾರದ ವತಿಯಿಂದ ತಂದಿರುವ ಸಪ್ತಪದಿ ಯೋಜನೆಯಂತೆ ಅಕ್ಷರಭ್ಯಾಸ ಕಾರ್ಯಕ್ರಮವನ್ನ ಶಿಕ್ಷಣ ಇಲಾಖೆ ವತಿಯಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲೂ ಹಮ್ಮಿಕೊಳ್ಳುವಂತೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪೋಷಕರ ಕರ್ತವ್ಯ, ಮಕ್ಕಳಿಗೆ ಶಿಕ್ಷಣದ ಜೊತೆಯಲ್ಲೆ ಕಲೆ ಕ್ರೀಡೆ ಸಾಂಸ್ಕೃತಿಕ ಸಂಗೀತ ಸೇರಿದಂತೆ ಯಾವ ಕ್ಷೇತ್ರದಲ್ಲಿ ಪ್ರತಿವಭಾವಂತರು ಎಂದು ಅರಿತು ಪ್ರಥಮ ಹಂತದಲ್ಲೆ ಪೋಷಕರು ಮನೆಯಿಂದ ಪ್ರೋತ್ಸಾಹ ನೀಡಬೇಕು ಮಕ್ಕಳು ಮುಖ್ಯವಾಹಿನಿಗೆ ಬಂದು ದೇಶದ ಅತ್ಯುತ್ತಮ ವ್ಯಕ್ತಿಯಾಗಿ ನಿರ್ಮಾಣವಾಗುತ್ತಾರೆ.

ಬಂದಂತ ಮಕ್ಕಳ ಪೋಷಕರು ಮಕ್ಕಳಿಗೆ ವಿದ್ಯಾರಂಭ ಮಾಡಿಸಿ ಭಕ್ತಿಯನ್ನು ಸಮರ್ಪಿಸಿ ನಂಬಿಕೆಯನ್ನು ಪುನರ್ಜೀವನಗೊಳಿಸಿದರು ಸರಸ್ವತಿ ಪೂಜೆ ಮಾಡಿ ಆನಂತರ ಮಕ್ಕಳಿಗೆ ಹೆತ್ತವರು ಮಕ್ಕಳ ಕೈಹಿಡಿದು ಅಕ್ಕಿ ಕಾಲಿನಲ್ಲಿ ಓಂಕಾರ ಮತ್ತು ಗಣೇಶನಾಮ ಹಾಗೂ ತಮ್ಮ ಮಾತೃಭಾಷೆ ಅ ಆ ಇ ಮುಂತಾದವುಗಳನ್ನು ಬರೆಸುವುದರ ಬರೆಯುವ ಮೂಲಕ ಅರ್ಚಕರಾದ ನಾಗರಾಜ್ ಶಾಸ್ತ್ರಿ ಹಾಗೂ ರಾಘವೇಂದ್ರ ನೇತೃತ್ವದಲ್ಲಿ ಅಕ್ಷರಭ್ಯಾಸ ಮಾಡಿದರು.

ಇದೇ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ,ಮಹರ್ಷಿ ಪಬ್ಲಿಕ್ ಶಾಲೆ C E O ತೇಜಸ್ ಶಂಕರ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಬಿಜೆಪಿ ನಗರ ಉಪಾಧ್ಯಕ್ಷ ಜೋಗಿ ಮಂಜು,ಜೆಡಿಎಸ್ ಕಾರ್ಯದಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್, ಎಸ್ ಎನ್ ರಾಜೇಶ್, ಖುಷಿ,ಸವಿತಾ ಘಾಟ್ಕೆ, ಜಯಶ್ರೀ ಶಿವರಾಂ, ವಿದ್ಯಾ, ಪುಷ್ಪ, ರುಕ್ಮಿಣಿ, ಶಾಲೆಯ ಪ್ರಾಂಶುಪಾಲ ಗೋಪಾಲಸ್ವಾಮಿ, ಬಿ ಏನ್ ಅನಿತಾ, ಪ್ರಿಯಾಂಕ, ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು

Leave a Reply

Your email address will not be published. Required fields are marked *

× How can I help you?