ಮೈಸೂರು-ಅಳಿವಿನಂಚಿನಲ್ಲಿರುವ-ಗುಬ್ಬಿ-ಸಂತತಿಯನ್ನು-ಮುಂದಿನ- ಪೀಳಿಗೆಗೂ-ಉಳಿಸಿ-ಉರುಗ-ತಜ್ಞ-ಸ್ನೇಕ್-ಶ್ಯಾಮ್

ಮೈಸೂರು– ಇತ್ತೀಚಿನ ದಿನಗಳಲ್ಲಿ ಗುಬ್ಬಚ್ಚಿ ಅಳಿವಿನಂಚಿನಲ್ಲಿದೆ. ಗುಬ್ಬಚ್ಚಿ ಉಳಿದರೆ ಉತ್ತಮ ಪರಿಸರ ನೋಡಲು ಸಾಧ್ಯ. ನಾವು ಗುಬ್ಬಚ್ಚಿಗಳೊಂದಿಗೆ ಬೆಳೆದವರು, ಪರಿಸರ ಸಮತೋಲನ ಬಹಳ ಮುಖ್ಯ, ಗುಬ್ಬಚ್ಚಿ ಮಾತ್ರವಲ್ಲ ಎಲ್ಲ ಪಕ್ಷಿಗಳು ಕೂಡ ಅಳಿವಿನಂಚಿನಲ್ಲಿದೆ. ಆದ್ದರಿಂದ ಮುಂದಿನ ಪೀಳಿಗೆಗೂ ಗುಬ್ಬಿ ಸಂತತಿ ಉಳಿಸಿ ಎಂದು ಉರುಗ ತಜ್ಞ ಸ್ನೇಕ್ ಶ್ಯಾಮ್ ಸಲಹೆ ನೀಡಿದರು.

ನಗರದ ಮಹಾರಾಜ ಮೈದಾನದ ಮುಂಭಾಗ ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ ವಿಶ್ವ ಗುಬ್ಬಚ್ಚಿ ದಿನಾಚರಣೆ ಅಂಗವಾಗಿ ಗುಬ್ಬಚ್ಚಿ ಹಬ್ಬ ಆಚರಿಸಲಾಯಿತು ಪಕ್ಷಿಗಳಿಗೆ ನೀರಿನ ಬೌಲು ಅಳವಡಿಸಿ ನೀರು ಹಾಗೂ ಆಹಾರ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿ
ಇಂದು ಕೃಷಿಗೆ ಕ್ರಿಮಿನಾಶಕಗಳನ್ನು ಬಳಸಲಾಗುತ್ತಿದೆ. ಇದು ವಿಷಕಾರಿಯಾಗಿದ್ದು, ಗುಬ್ಬಿಗಳು ಸಾವನಪ್ಪುತ್ತಿದೆ. ಗುಬ್ಬಚ್ಚಿ ಉಳಿಸಿದರೆ ಪರಿಸರದ ಉಳಿವು. ಮನುಷ್ಯರು ನಾವು ಮಾತ್ರ ಬದುಕದೆ, ಎಲ್ಲಾ ಜೀವಿಗಳು ಬದುಕಲು ಅವಕಾಶ ಮಾಡಿಕೊಡಬೇಕೆಂದು ಹೇಳಿದರು.

ಸುಮಾರು 25ಕ್ಕೂ ಅಧಿಕ ಗುಬ್ಬಿಗಳ ಪ್ರಬೇಧವಿದೆ. ಆದರೆ ಗುಬ್ಬಿ ಸಂತತಿ ಇಂದು ಅಳಿವಿನಂಚಿನಲ್ಲಿದೆ. ಮನುಷ್ಯನಿಂದ ಗುಬ್ಬಿಗೆ ಕಂಟಕ ಎದುರಾಗಿದೆ ಎಂದರು. ವಾಸಿಸಲು ಪೂರಕ ವಾತಾವರಣ ಇಲ್ಲದಿರುವುದು ಗುಬ್ಬಿ ಸಂತತಿ ಇಳಿಮುಖವಾಗಲು ಪ್ರಮುಖ ಕಾರಣ. ಗುಬ್ಬಿಯ ಸಂಕುಲವನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ನಂತರ ಮಾತನಾಡಿದ ಚಿತ್ರನಟ ಆದಿ ಲೋಕೇಶ್ ಗುಬ್ಬಿ ಕಾಣಲು ಸಿಗುತ್ತಿಲ್ಲ. ಆದರೆ ನಮ್ಮ ಬಾಲ್ಯವನ್ನು ನೆನಪಿಡಿಸಿಕೊಂಡರೆ ಗುಬ್ಬಚ್ಚಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ಆದರೆ ಇಂದು ಗುಬ್ಬಚ್ಚಿ ಸೇರಿದಂತೆ ಹಲವು ಪಕ್ಷಿ ಸಂಕುಲ ಅವಸಾನದಂಚಿನಲ್ಲಿದೆ ಎಂದರು. ಗುಬ್ಬಚ್ಚಿ ದಿನ ಮಾತ್ರ ಪಕ್ಷಿಗಳಿಗೆ ನೀರು ಆಹಾರ ನೀಡುವುದು ಮುಖ್ಯವಲ್ಲ ಪ್ರತಿದಿನವೂ ಸಹ ಪಕ್ಷಿ ಸಂಕುಲನವನ್ನು ಉಳಿಸಲು ತಮ್ಮ ತಮ್ಮ ಮನೆಯ ಮೇಲೆ ಪ್ರಾಣಿ ಪಕ್ಷಿಗಳಿಗೆ ನೀರಿನ ಬಟ್ಟಲು ಅಳವಡಿಸುವ ಕೆಲಸವಾಗಬೇಕು ಎಂದು ಹೇಳಿದರು.


ನಂತರ ಮಾತನಾಡಿದ ಕಾಂಗ್ರೆಸ್ ಮುಖಂಡರಾದ ಎನ್ಎಂ ನವೀನ್ ಕುಮಾರ್, ಜನಸಂಖ್ಯೆಗಿಂತ ವಾಹನ‌ಸಂದ್ರತೆ ನಿಯಂತ್ರಣವಾಗದೇ ಹೆಚ್ಚಾಗಿರುವುದರಿಂದ ಪರಿಸರ ವಿಕೋಪಕ್ಕೆ ತೆರಳಿ ಸಣ್ಣಪುಟ್ಟ ಪ್ರಾಣಿಪಕ್ಷಿಗಳ ಸಂಕುಲ ನಾಶವಾಗುತ್ತಿದೆ, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರೀಕನ ಹೊಣೆ, ಹವಮಾನ ಮಾಸಗಳ ಬದಲಾವಣೆ ಮುನ್ಸೂಚನೆ ಕೊಡುವುದು ಪ್ರಾಣಿಪಕ್ಷಿಗಳೇ ಮೊದಲು ಹಾಗಾಗಿ ನಾಗರೀಕತೆಯೊಂದಿಗೆ ಉತ್ತಮ ಒಡನಾಟದಲ್ಲೆ ಜೀವಿಸುವ ಪ್ರಾಣಿಪಕ್ಷಿಗಳಿಗೆ ಇಂತಹ ರಣಬಿಸಿಲಿನಲ್ಲಿ ಒಂದಷ್ಟು ನೀರು ಆಹಾರ ನೀಡುವ ಕಾರ್ಯಕ್ಕೆ ಸಾರ್ವಜನಿಕರು ಮುಂದಾಗಬೇಕಿದೆ ಎಂದರು.

ಈ ವೇಳೆ ಬೇಸಿಗೆಯ ಬಿಸಿಲಿನ ತಾಪದಿಂದ ಪ್ರಾಣಿ ಪಕ್ಷಿಗಳನ್ನು ರಕ್ಷಿಸೋಣ- ಅಳಿದು ಹೋಗುತ್ತಿರುವ ಗುಬ್ಬಚ್ಚಿ ಸಂಕುಲಗಳ ಉಳಿವಿಗಾಗಿ ಜನಜಾಗೃತಿ ಮೂಡಿಸೋಣ ನಶಿಸಿ ಹೋಗುತ್ತಿರುವ ಗುಬ್ಬಚ್ಚಿ ಸಂಕುಲವನ್ನು ಸಂರಕ್ಷಿಸೋಣ-ಎಂಬ ಘೋಷವಾಕ್ಯ ನಾಮಫಲಕದ ಮೂಲಕ ಪಕ್ಷಿಗಳ ಸಂರಕ್ಷಣೆಯ ಸಂದೇಶ ಸಾರಿದರು.

ಈ ಸಂದರ್ಭದಲ್ಲಿ ವನ್ಯಜೀವಿ ಮಂಡಳಿಯ ರಾಜ್ಯ ಸದಸ್ಯರಾದ ಡಾ. ಸಂತೃಪ್ತಿ ಗೌಡ,ಕೆ ಆರ್ ವಿಭಾಗದ ಉಪ ಪೊಲೀಸ್ ಆಯುಕ್ತರಾದ ರಮೇಶ್ ಕುಮಾರ್, ಉರುಗ ತಜ್ಞ ಸ್ನೇಕ್ ಶ್ಯಾಮ್, ಚಿತ್ರನಟ ಆದಿ ಲೋಕೇಶ್, ಸೌಮ್ಯ ಆದಿ ಲೋಕೇಶ್, ಕಿರುತರೆ ನಟ ಮಹೇಂದರ್, ಎನ್ ಎಂ ನವೀನ್ ಕುಮಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ವೈದ್ಯರಾದ ಶ್ರೀನಿವಾಸ್ ಆಚಾರ್,ಶ್ರೀನಿವಾಸ್ ಭಾಷ್ಯಂ, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಎಸ್ ಎನ್ ರಾಜೇಶ್, ಚಕ್ರಪಾಣಿ, ಸುಚೇಂದ್ರ, ಮಹಾನ್ ಶ್ರೇಯಸ್, ಮಿರ್ಲೆ ಪನಿಷ್, ರಾಕೇಶ್,
ಹಾಗೂ ಇನ್ನಿತರರು ಹಾಜರಿದ್ದರು.

Leave a Reply

Your email address will not be published. Required fields are marked *

× How can I help you?