
ಮೈಸೂರು:ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹುತಾತ್ಮ ಯೋಧರ ತಾಯಂದಿರು ಮತ್ತು ಮಡದಿಯರಿಗೆ ಗೌರವ ಸಮರ್ಪಣೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮೈಸೂರು ನಗರದ ಪುರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಗೌಡ, ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್,ಮೈಸೂರು ಜಿಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಡಾ. ಬಿ ಜೆ ವಿಜಯ್ ಕುಮಾರ್,ವಾಣಿ ಶಿವರಾಮ್ ,ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷರಾದ ವಿ.ಪಿ ಸುಶೀಲ ,ರಾಜ್ಯ ಪ್ರಧಾನ ಕಾರ್ಯದರ್ಶಿ ಪುಟ್ಟರಾಜು,ಉಪಾಧ್ಯಕ್ಷರಾದ ಅಮೀನ ಬೇಗಂ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಅಶ್ರಫ್,ಸಂಘಟನಾ ಕಾರ್ಯದರ್ಶಿ ಷರೀಫ್ ಅಹಮ್ಮದ್, ಕಾರ್ಯದರ್ಶಿ ಭಾಗ್ಯಮ್ಮ, ಖಜಾಂಚಿ ಲತಾ ಕುಮಾರ್ ಬಿ, ಜಿಲ್ಲಾ ಅಧ್ಯಕ್ಷರಾದ ಆರ್ ಸುಭಾಷ್, ಜಿಲ್ಲಾ ಉಪಾಧ್ಯಕ್ಷರಾದ ಸುದರ್ಶನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿತ್ಯ ಎನ್ ಹಾಗೂ ಇನ್ನು ಮುಂತಾದವರು ಉಪಸ್ಥಿತರಿದ್ದರು.
——————ಮಧುಕುಮಾರ್