ಮೈಸೂರು-ಕನ್ನಡಿಗರ ರಕ್ತ ಹೀರುತ್ತಿರುವ ರಾಜ್ಯಸರಕಾರ-ಬಸ್ ದರ ಏರಿಕೆ ವಿರೋಧಿಸಿ ಕರ್ನಾಟಕ ಸೇನಾ ಪಡೆ ಪ್ರತಿಭಟನೆ

ಮೈಸೂರು-ಬಸ್ ದರವನ್ನು 15 ಪರ್ಸೆಂಟ್ ನಷ್ಟು ಹೆಚ್ಚಳ ಮಾಡಿರುವ ಸರಕಾರದ ನಡೆಯನ್ನು ವಿರೋಧಿಸಿ ಇಂದು ಕರ್ನಾಟಕ ಸೇನಾ ಪಡೆ ವತಿಯಿಂದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆಯನ್ನು ನಡೆಸಲಾಯಿತು.

ಸಂಘಟನೆಯ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಮಾತನಾಡಿ,ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದಿನ ಬೆಳಗಾದರೆ ಒಂದಲ್ಲ ಒಂದು ಬೆಲೆ ಏರಿಕೆ ಮಾಡಿ, ಕನ್ನಡಿಗರ ರಕ್ತ ಹೀರುತ್ತಿದೆ.ಸರ್ಕಾರದ ಬಕಾಸುರ ಹೊಟ್ಟೆ ತುಂಬಿಸಲು ಕನ್ನಡಿಗರು ಇನ್ನೆಷ್ಟು ತೆರಿಗೆ ಶುಲ್ಕ ತೆತ್ತಬೇಕೋ ಗೊತ್ತಿಲ್ಲ.20 ರೂ ಇದ್ದ ಸ್ಟ್ಯಾಂಪ್ ಪೇಪರ್ ಬೆಲೆಯನ್ನು 100 ರೂಪಾಯಿಗೆ ಏರಿಸಿದ್ದಾರೆ. ರಿಜಿಸ್ಟ್ರೇಷನ್ ದರ, ಆಸ್ತಿ ತೆರಿಗೆ ದರ 30-40% ಏರಿಕೆಯಾಗಿದೆ. ವಿದ್ಯುತ್ ದರ, ಜನನ ಮರಣ ಪ್ರಮಾಣ ಪತ್ರ ಶುಲ್ಕ, ಹಾಲಿನ ದರ ಹಾಗೂ ಜೊತೆಗೆ ಈಗ ಬಸ್ ದರವನ್ನು 15% ಏರಿಸಿರುವುದು ಅತ್ಯಂತ ಖಂಡನೀಯ ಎಂದರು.

ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಹಲವಾರು ಬಿಟ್ಟಿ ಭಾಗ್ಯಗಳನ್ನು ಘೋಷಣೆ ಮಾಡಿ, ಈಗ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ದೂಡುತ್ತಿದೆ. ಶ್ರೀಲಂಕಾ ದೆಹಲಿಯಲ್ಲಾದಂತೆ ನಮ್ಮ ರಾಜ್ಯವು ಆರ್ಥಿಕ ದೀವಾಳಿಯಾಗಲಿದೆ ಎಂದು ಭವಿಷ್ಯ ನುಡಿದರು.

ಇಷ್ಟೊಂದು ಬಾರಿ ಬಜೆಟ್ ಮಂಡನೆ ಮಾಡಿರುವ ಮಾನ್ಯ ಮುಖ್ಯಮಂತ್ರಿಗಳು ಹಣಕಾಸಿನ ವ್ಯವಸ್ಥೆಯನ್ನು ನೋಡಿಕೊಳ್ಳದೆ, ಕೆಎಸ್ಆರ್ಟಿಸಿ ಅವರಿಗೆ ಸರಿಯಾಗಿ ಸಂಬಳವನ್ನು ನೀಡದೆ, ಅವರು ಈಗ ಸಾರಿಗೆ ಬಂದ್ ಮಾಡುತ್ತೀವಿ ಎಂದ ಮೇಲೆ ಶಕ್ತಿ ಯೋಜನೆಗೆ ಹಣ ಹೊಂದಿಸಲು ಈಗ ಏಕಾಏಕಿ 15% ಬಸ್ ದರ ಏರಿಕೆ ಮಾಡಿರುವುದು ಅತ್ಯಂತ ಖಂಡನೀಯ.

ಈ ಕೂಡಲೇ ಮಾನ್ಯ ಮುಖ್ಯಮಂತ್ರಿಗಳು ಏರಿಕೆ ಮಾಡಿರುವ ಸಾರಿಗೆ ದರವನ್ನು ವಾಪಸ್ ಪಡೆಯಬೇಕು ಎಂದು ಅವರು ಆಗ್ರಹಿಸಿದರು.

ಕೃಷ್ಣಪ್ಪ, ಪ್ರಭುಶಂಕರ್, ಹನುಮಂತಯ್ಯ, ಪ್ರಭಾಕರ್, ನೇಹ, ಸಿಂಧುವಳಿ ಶಿವಕುಮಾರ್, ಭಾಗ್ಯಮ್ಮ, ಡಾ .ಶಾಂತರಾಜೇಅರಸ್, ನಾಗರಾಜು, ಶುಭಶ್ರೀ, ವರ್ಕುಡ್ ಕೃಷ್ಣೇಗೌಡ, ಸ್ವಾಮಿ ಗೌಡ, ರಘು ಅರಸ್, ಪ್ರದೀಪ್, ದರ್ಶನ್ ಗೌಡ, ಚಂದ್ರಶೇಖರ್, ತ್ಯಾಗರಾಜ್, ಬಸವರಾಜು, ಗುರುಮಲ್ಲಪ್ಪ ಹಾಗೂ ರಾಮಕೃಷ್ಣೇಗೌಡ ಇನ್ನಿತರರು ಉಪಸ್ಥಿತರಿದ್ದರು.

———––ಮಧುಕುಮಾರ್

Leave a Reply

Your email address will not be published. Required fields are marked *

× How can I help you?