ಮೈಸೂರು-ಚುಂಚನಕಟ್ಟೆ ಪ್ರವಾಸಿ ತಾಣದಲ್ಲಿ ನವೆಂಬರ್ 30 ಹಾಗೂ ಡಿಸೆಂಬರ್ 1 ರಂದು ಜಲಪಾತೋತ್ಸವ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕೆ.ಆರ್.ನಗರ ಶಾಸಕ ಡಿ.ರವಿಶಂಕರ್ ಮಾಹಿತಿ ನೀಡಿದರು.
ಇಂದು ಮೈಸೂರಿನ ಜಲ ದರ್ಶಿನಿಯಲ್ಲಿ ಪತ್ರಿಕಾಘೋಷ್ಠಿ ನಡೆಸಿದ ಅವರು,ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಜಲಪಾತೋತ್ಸವವನ್ನು 30 ನೇ ತಾರೀಕಿನ ಸಂಜೆ 4.30 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಉದ್ಘಾಟಿಸಲಿದ್ದಾರೆ.ಉದ್ಘಾಟನೆಯ ಬಳಿಕ ಸ್ಥಳೀಯ ಜಾನಪದ ಕಲಾವಿದರಿಂದ ಕಾರ್ಯಕ್ರಮ ನೆರವೇರಲಿದ್ದು,ಸಂಜೆ 7 -30 ಕ್ಕೆ ಖ್ಯಾತ ಗಾಯಕ ರಘು ದೀಕ್ಷಿತ್ ತಂಡದವರಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ಕೊಟ್ಟರು.
ಡಿ.1 ರ ಸಂಜೆ ಸ್ಯಾಂಡಲ್‌ವುಡ್ ನೈಟ್ಸ್ ಹಾಗೂ ಮಣಿಕಾಂತ್ ಕದ್ರಿ ತಂಡದಿಂದ ಮ್ಯೂಸಿಕಲ್ ನೈಟ್ಸ್ ಹಮ್ಮಿಕೊಳ್ಳ ಲಾಗಿದೆ.ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.
———–——-ಮಧುಕುಮಾರ್