
ಮೈಸೂರು-ಕನ್ನಡ ನಾಡು–ನುಡಿ ಬಗೆಗೆ ಅಪಾರ ಕಳಕಳಿ ಹೊಂದಿದ್ದ ಡಾ. ವಿಷ್ಣುವರ್ಧನ್ ಅವರು ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಕಲಾವಿದ ಎಂದು ಶಾಸಕ ಟಿ.ಎಸ್ ಶ್ರೀವತ್ಸ ಶ್ಲಾಘಿಸಿದರು.
ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಲಕ್ಷ್ಮಿ ಚಿತ್ರಮಂದಿರದ ಮುಂಭಾಗ ಸಾಮ್ರಾಟ್ ಡಾಕ್ಟರ್ ವಿಷ್ಣುವರ್ಧನ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ 15ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅಭಿಮಾನಿಗಳಿಗೆ ಅನ್ನದಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯುವಜನರಲ್ಲಿ ಭಾಷಾಭಿಮಾನ ಮತ್ತು ದೇಶಾಭಿಮಾನ ಮೂಡಿಸುವಂತಹ ಸದಭಿರುಚಿ ಚಿತ್ರಗಳಲ್ಲಿ ನಟಿಸಿ ಜನಮನ್ನಣೆ ಗಳಿಸಿದ್ದ ಅವರ ಜೀವನ ಕಿರಿಯ ನಟರಿಗೆ ಮಾದರಿ ಎಂದರು.
ಇದೇ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ಮಾಜಿನಗರ ಪಾಲಿಕಾ ಸದಸ್ಯರಾದ ಎಂ ಡಿ ಪಾರ್ಥಸಾರಥಿ, ಮದನ್, ಪಾಪು, ಟಿ ಎಸ್ ಅರುಣ್, ನವೀನ್, ರಮೇಶ್, ಕುಮಾರ್, ರಾಜು, ರವಿ, ಶ್ರೀಧರ್, ಎಂ ಎನ್ ಚೇತನ್ ಗೌಡ, ಹಾಗೂ ಇನ್ನಿತರರು ಹಾಜರಿದ್ದರು.
——————–ಮಧುಕುಮಾರ್