ಮೈಸೂರು-ಅರಮನೆ ಉತ್ತರ ದ್ವಾರ ಶ್ರೀ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಮೂಹ ದೇವಾಲಯಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ವತಿಯಿಂದ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ರಾಮಕೃಷ್ಣನಗರದ ಸ್ವರಾಲಯ ಸಂಗೀತ ಸಂಸ್ಥೆಯ ಅಧ್ಯಕ್ಷೆ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ವಿದುಷಿ ಡಾ.ಸುಮ ಹರಿನಾಥ್ ಅವರು ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಹೊತ್ತು ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಗೂ ಕೀರ್ತನೆಗಳನ್ನು ಸುಮಧುರವಾಗಿ ಪ್ರಸ್ತುತಪಡಿಸಿದರು.
ಇವರಿಗೆ ಪಕ್ಕವಾದ್ಯದಲ್ಲಿ ಮೃದಂಗದಲ್ಲಿ ವಿದ್ವಾನ್ ಶ್ಯಾಮ್ ಹಾಗೂ ವಯಲಿನ್‌ನಲ್ಲಿ ವಿದ್ವಾನ್ ಚೇತನ್ ಅವರು ಸಹಕಾರ ನೀಡಿದರು.