
ಮೈಸೂರು-ನಗರದ ಸರಸ್ವತಿಪುರಂನಲ್ಲಿರುವ ಜ್ಞಾನೋದಯ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ಕು.ಶರಧಿ ಶಾಸ್ತ್ರೀ ಅವರು ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಸ್ಪೋರ್ಟ್ಸ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ನಡೆಸಿದ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಮೂಲಕ ಆರನೇ ಸ್ಥಾನ ಪಡೆದು ರಾಜ್ಯ ಹಾಗೂ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಇತ್ತೀಚೆಗೆ ಕಂಚಿನ ಪದಕವನ್ನು ನೀಡಿ ಗೌರವಿಸಿತು.

ಹಾಗೆಯೇ ಕಾಲೇಜಿನ ಮತ್ತೋರ್ವ ವಿದ್ಯಾರ್ಥಿನಿ ರಿವಾ ಮಾನ್ಯ ಅವರು ಕರ್ನಾಟಕ ಪದವಿ ಪೂರ್ವ ಇಲಾಖೆಯು ನಡೆಸಿದ 68 ಕೆಜಿ ಮೇಲ್ಪಟ್ಟ ರಾಜ್ಯಮಟ್ಟದ ಕರಾಟೆ (ಕುಮಿತೆ) ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.
ಈ ಇಬ್ಬರು ವಿದ್ಯಾರ್ಥಿಗಳ ಅಭೂತಪೂರ್ವ ಕ್ರೀಡಾ ಸಾಧನೆಗೆ ಕಾಲೇಜು ಆಡಳಿತ ಮಂಡಳಿ,ಪ್ರಾoಶುಪಾಲರು ಹಾಗೂ ಬೋಧಕ, ಬೋಧಕೇತರ ವರ್ಗದವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.