ಮೈಸೂರು:ಆನ್‌ಲೈನ್ ಬೆಟ್ಟಿಂಗ್,ಗೇಮ್-ಸಾವಿರಾರು ಕುಟುಂಬಗಳು ಬೀದಿಪಾಲು-ನಿಷೇದಕ್ಕೆ ಮುಂದಾಗುವಂತೆ ವಿಕ್ರಂ ಅಯ್ಯಂಗಾರ್ ಸರಕಾರಕ್ಕೆ ಒತ್ತಾಯ

ಮೈಸೂರು:ಆನ್‌ಲೈನ್ ಬೆಟ್ಟಿಂಗ್ ಮತ್ತು ಗೇಮ್‌ಗಳಿಂದ ಆಗುತ್ತಿರುವ ಅನಾಹುತಗಳನ್ನು ತಡೆಯಬೇಕು ಹಾಗೂ ಅವುಗಳನ್ನು ನಿಷೇಧಿಸಬೇಕು ಎಂದು ಕೆ.ಎಂ.ಪಿ.ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ಸರಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿರುವ ಅವರು,ಈಚೆಗೆ ಆನ್‌ಲೈನ್ ಬೆಟ್ಟಿಂಗ್ ಹಾಗೂ ಆನ್‌ಲೈನ್ ಗೇಮಿಂಗ್ ವೆಬ್‌ಸೈಟ್‌ಗಳಿಂದ ಅನೇಕ ಕುಟುಂಬಗಳು ಬೀದಿಗೆ ಬಂದಿವೆ. ಹಲವಾರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ.

ಆನ್‌ಲೈನ್ ಬೆಟ್ಟಿಂಗ್ ಜಾಲಕ್ಕೆ ಸಿಲುಕಿರುವವರು ಬಹುತೇಕ ಯುವಕ–ಯುವತಿಯರೇ ಆಗಿದ್ದಾರೆ. ಪದವಿ ಪಡೆದು ಉದ್ಯೋಗ ಗಳಿಸಿ ಕುಟುಂಬದ ಜವಾಬ್ದಾರಿ ನೋಡಿಕೊಳ್ಳಬೇಕಾದ ಸಮಯದಲ್ಲಿ ಬೆಟ್ಟಿಂಗ್ ಜಾಲದಲ್ಲಿ ಸಿಲುಕಿ ನರಳುತ್ತಿದ್ದಾರೆ. ಸಾವಿರಾರು ಮಂದಿ ಆತ್ಮಹತ್ಯೆಗೆ ಶರಣಾಗಿದ್ದು, ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗಿವೆ.ಮಂತ್ರಿ ಮಹೋದಯರು,ಅಧಿಕಾರಿಗಳು ಜಾಣ ಮೌನಕ್ಕೆ ಶರಣಾಗಿರುವುದು ತಮ್ಮ ಹುದ್ದೆಗಳಿಗೆ ಘನತೆ ತರುವುದಿಲ್ಲ’ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಕೆಲವು ಪೊಲೀಸ್ ಠಾಣೆಗಳಲ್ಲಿ ಅನಧಿಕೃತವಾಗಿ ಬೆಟ್ಟಿಂಗ್ ವ್ಯವಸ್ಥೆ ನಡೆಸುತ್ತಿದ್ದ ಆನ್‌ಲೈನ್ ಬುಕ್ಕಿಗಳ ಮೇಲೆ ಎಫ್‌.ಐ.ಆರ್ ದಾಖಲಾಗಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ಜನರಿಗೆ ಇದರ ಬಗ್ಗೆ ಅರಿವು ಮೂಡಿಸಬೇಕಾಗಿದೆ.ನಮ್ಮ ಕೆ.ಎಂ.ಪಿ.ಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಾಗ್ರತಿ ಮೂಡಿಸುವ ಕಾರ್ಯಕ್ರಮಗಳ ನಡೆಸುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

——————--ಮಧುಕುಮಾರ್

Leave a Reply

Your email address will not be published. Required fields are marked *

× How can I help you?