ಮೈಸೂರು-ದೇಶದ ಪ್ರತಿಯೊಬ್ಬ ಪ್ರಜೆಗೂ ರಾಜಕೀಯ,ಸಾಮಾಜಿಕ,ಆರ್ಥಿಕ ಸಮಾನತೆಯನ್ನು ದೊರಕಿಸಿಕೊಟ್ಟ ಭಾರತ ಸಂವಿಧಾನದ ಆಶಯವನ್ನು ಎತ್ತಿ ಹಿಡಿಯಲು ನಾವೆಲ್ಲರೂ ಶ್ರಮಿಸೋಣ ಎಂದು ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಕರೆ ನೀಡಿದರು.
ಅವರು ನಗರದ ಟೌನ್ ಹಾಲ್ ನಲ್ಲಿ ಮೈಸೂರು ಮಹಾನಗರ ಪಾಲಿಕೆ,ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ವತಿಯಿಂದ ನಡೆದ 75 ನೇ ಸಂವಿಧಾನ ದಿನಾಚರಣೆಯಲ್ಲಿ ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಪುಷ್ಪಾರ್ಚನೆ ನಡೆಸಿ ಮಾತನಾಡಿದರು.
ಜೈ ಭೀಮ್ ಜೈ ಸಂವಿಧಾನ ಘೋಷಣೆ ಕೂಗಿ ‘ಸಂವಿಧಾನ ದಿನ’ದ ಶುಭಾಶಯ ಕೋರಿದ ಅವರು ಭಾರತ ದೇಶ ಇಡೀ ವಿಶ್ವದಲ್ಲಿ ಬಾಬಾಸಾಹೇಬರ ಸಂವಿಧಾನದ ಕಾರಣಕ್ಕೆ ತಲೆಯೆತ್ತಿ ನಿಂತಿದೆ.ವಿಶ್ವವೇ ಮೆಚ್ಚುವಂತಹ ಸಂವಿಧಾನದ ಅಡಿಯಲ್ಲಿ ಬಾಳುತ್ತಿರುವ ನಾವುಗಳು ಆ ಸಂವಿಧಾನದ ಆಶಯಗಳಿಗೆ ಚ್ಯುತಿ ಬಾರದ ಹಾಗೆ ನಡೆದುಕೊಳ್ಳೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ.ಬಿ ಜೆ ವಿಜಯ್ ಕುಮಾರ್,ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷರಾದ ಆರ್ ಮೂರ್ತಿ,ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷರಾದ ಎನ್. ಭಾಸ್ಕರ್,ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ,ಲಕ್ಷ್ಮಣ್,ಪತ್ರಕರ್ತರ ಸಂಘದ ಅಧ್ಯಕ್ಷರಾದ ದೀಪಕ್, ಮಾಜಿ ಮೂಡ ಅಧ್ಯಕ್ಷರಾದ ರಾಜೀವ್,ವಕೀಲರುಗಳಾದ ತಿಮ್ಮಯ್ಯ, ಕಾಂತರಾಜು ಸೇರಿದಂತೆ ಹಲವು ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
————–——ಮಧುಕುಮಾರ್