ನಾಗಮಂಗಲ-ಭವಿಷ್ಯದ ಸವಾಲುಗಳನ್ನು ಎದುರಿಸಲು ನಿರಂತರ ಕಲಿಕೆಯಲ್ಲಿ ತೊಡಗುವಂತೆ ತಾಂತ್ರಿಕ ವಿದ್ಯಾರ್ಥಿಗಳಿಗೆ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಲಹೆ

ನಾಗಮಂಗಲ:ಭವಿಷ್ಯದಲ್ಲಿ ಎ.ಐ ರೋಬೋಟ್ ಗಳು ವಿಶ್ವವನ್ನು ವ್ಯಾಪಿಸಲಿದ್ದು ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ಉದ್ಯೋಗಿಗಳಿಗೆ ತೀವ್ರ ಪೈಪೋಟಿ ನೀಡಲಿವೆ.ವಿದ್ಯಾರ್ಥಿಗಳು ಆ ಸವಾಲನ್ನು ಎದುರಿಸಲು ಇಂದಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕೆಂದು ಆದಿಚುಂಚನಗಿರಿ ಕ್ಷೇತ್ರದ ಪೀಠಾಧಿಪತಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀ ಜಿಯವರು ತಿಳಿಸಿದರು.

ನಾಗಮಂಗಲ ತಾಲ್ಲೂಕಿನ ಬಿ.ಜಿ.ನಗರದ ಬಿ.ಜಿ.ಎಸ್. ಆಡಿಟೋರಿಯಂ ನಲ್ಲಿ ನಡೆದ ಆದಿಚುಂಚನಗಿರಿ ವಿಶ್ಶವಿದ್ಯಾನಿಲಯದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪದವಿ ಪ್ರಧಾನ ಸಮಾರಂಭದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು.

ರೇವ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ.ಎಸ್. ವೈ.ಕುಲಕರ್ಣಿ ಅವರು ಮಾತನಾಡಿ,ವಿದ್ಯಾರ್ಥಿಗಳು ನಿರಂತರವಾಗಿ ಕಲಿಕೆಯಲ್ಲಿ ಹೆಚ್ಚು ಶ್ರಮಿಸಿ್ದರೆ ಜೀವನದಲ್ಲಿ ಯಶಸ್ಸುಗಳಿಸಲು ಸಾಧ್ಯ ಎಂದು ಹೇಳಿದರು.

ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ಸಲಹೆಗಾರ ಡಾ.ಈ.ಎಸ್. ಚಕ್ರವರ್ತಿ ರವರು ಮಾತನಾಡುತ್ತಾ, ವಿದ್ಯಾರ್ಥಿಗಳು ತಂತ್ರಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ವಹಿಸಿ ಆಳವಾದ ಅಧ್ಯಯನ ಮಾಡುವ ಮೂಲಕ ಭವಿಷ್ಯದ ಸವಾಲುಗಳನ್ನು ಎದುರಿಸಲು ಸಿದ್ಧರಾಗುವಂತೆ ಹೇಳಿದರು.

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಂ.ಎ.ಶೇಖರ್ ಮಾತನಾಡಿ,ಪದವಿ ದೊರೆಯಿತೆಂದು ಕಲಿಕೆಯನ್ನು ನಿಲ್ಲಿಸಬಾರದು.ನಿರಂತರವಾದ ಅಧ್ಯಯನ ನಡೆಸುವ ಮೂಲಕ ಪ್ರಸ್ತುತ ವಿದ್ಯಮಾನ ಹಾಗು ತಾಂತ್ರಿಕ ಮಾಹಿತಿಗಳನ್ನು ಪಡೆದುಕೊಳ್ಳುತ್ತಾ ಪ್ರಸ್ತುತಕ್ಕೆ ಒಗ್ಗುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇಂಜಿನಿಯರಿಂಗ್ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪದಕ,ಪ್ರಮಾಣ ಪತ್ರ ಮತ್ತು 2023-24 ನೇ ಸಾಲಿನ ವಿದ್ಯಾರ್ಥಿಗಳಿಗೆ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಪದವಿ ಪ್ರಧಾನ ಮಾಡಿದರು.

ಆದಿಚುಂಚನಗಿರಿ ವಿಶ್ವವಿದ್ಯಾಲಯದ ವತಿಯಿಂದ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕರಿಗೆ ಸನ್ಮಾನಿಸಲಾಯಿತು.

ಈ ಸಮಾರಂಭದಲ್ಲಿ ಆದಿಚುಂಚನಗಿರಿ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ.ಸಿ.ಕೆ.ಸುಬ್ಬರಾಯ, ಬಿ.ಜಿ.ಎ‌‌ಸ್ ತಾಂತ್ರಿಕ ಮಹಾವಿದ್ಯಾಲಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎನ್.ಶೋಭಾ, ಪ್ರಾಧ್ಯಾಪಕರಾದ ಡಾ. ಎಂ.ಬಿ.ಆನಂದ್ ರಾಜ್ ‌ಸೇರಿದಂತೆ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರುಗಳು, ಪೋಷಕರುಗಳು ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.

——————–ರವಿ ಬಿ ಹೆಚ್

Leave a Reply

Your email address will not be published. Required fields are marked *

× How can I help you?