ನಾಗಮಂಗಲ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇದ್ದ 1 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಮತ್ತು 12 ಮಿನಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಹಾಗೂ 39 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ಗುರುತಿಸಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಅದರಂತೆ ಸ್ವೀಕೃತವಾಗಿರುವ ಅರ್ಜಿಗಳನ್ನು 2025 ಮಾರ್ಚ್ ತಿಂಗಳ 24 ರಂದು ಮಾನ್ಯ ಜಿಲ್ಲಾಧಿಕಾರಿಗಳ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಅಂಗನವಾಡಿ ಸಹಾಯಕಿಯರ ಆಯ್ಕೆ ಸಮಿತಿ ಸಭೆಯಲ್ಲಿ ಮಂಡಿಸಲಾಗಿದ್ದು,
ಅಭ್ಯರ್ಥಿಗಳನ್ನು ಅಂಗನವಾಡಿ ಕಾರ್ಯಕರ್ತೆ ಯರನ್ನಾಗಿ ಗುರುತಿಸಲು ಶಿಫಾರಸ್ಸು ಮಾಡಲಾಗಿದೆ. ಈ ಆಯ್ಕೆ ಪಟ್ಟಿಯಲ್ಲಿ ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ ಲಿಖಿತವಾಗಿ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣೆಯನ್ನು ನಾಗಮಂಗಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ 2025 ಮೇ ತಿಂಗಳ 8 ರಂದು ಸಂಜೆ 5-30 ಸಮಯದ ಒಳಗೆ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ.

ನಿಗದಿತ ಅವಧಿಯ ನಂತರ ಸ್ವೀಕೃತವಾಗುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎನ್. ಸಿ.ಕೃಷ್ಣಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಬಿ.ಹೆಚ್. ರವಿ. ನಾಗಮಂಗಲ