ನಾಗಮಂಗಲ: ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳಾದ ದ್ರೌಪದಿ ಮರ್ಮು ಅರವರನ್ನು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯರು ಭೇಟಿ ಮಾಡಿದರು.
ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಿಗೆ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಚುಂಚಶ್ರೀಗಳು ಆಹ್ವಾನಿಸಿದರು.

ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್. ಡಿ.ಕುಮಾರಸ್ವಾಮಿ ಅವರು ಸಹ ಉಪಸ್ಥಿತರಿದ್ದರು.
-: ಬಿ.ಹೆಚ್. ರವಿ,