ನಾಗಮಂಗಲ-ಪಟ್ಟಣದ ತಾಲ್ಲೂಕು ಆಡಳಿತದ ಸೌಧದ ಆವರಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಾಗಮಂಗಲ ಪುರಸಭೆ ಹಾಗೂ ಬೆಳ್ಳೂರು ಪಟ್ಟಣ ಪಂಚಾಯಿತಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಶ್ರೀಮಹರ್ಷಿ ವಾಲ್ಮೀಕಿಯವರ ಜಯಂತ್ಯೋತ್ಸವ ಸಮಾರಂಭವನ್ನು ತಹಶೀಲ್ದಾರ್ ಜಿ.ಆದರ್ಶ ಅವರು ವಾಲ್ಮೀಕಿರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಶಿಕ್ಷಕ ಹೊನ್ನಾವರ ಹೆಚ್. ಎಸ್. ನಂದನ್ ಅವರು ಶ್ರೀ ಮಹರ್ಷಿ ವಾಲ್ಮೀಕಿ ಅವರ ಬಗ್ಗೆ ಉಪನ್ಯಾಸ ನೀಡಿದರು.
ಇದೇ ಸಮಾರಂಭದಲ್ಲಿ 10ನೇ ತರಗತಿಯಲ್ಲಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಹಾಗೂ ನಾಯಕ ಜನಾಂಗದ ಮುಖಂಡರಿಗೆ ತಾಲ್ಲೂಕು ಆಡಳಿತದ ವತಿಯಿಂದ ಸನ್ಮಾನಿಸಲಾಯಿತು.
ಈ ಸಮಾರಂಭದಲ್ಲಿ ಪುರಸಭೆ ಅಧ್ಯಕ್ಷ ಅಲೀ ಅನ್ಸರ್ ಪಾಷ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ಬಿ.ಎಸ್. ಸತೀಶ್. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಯೋಗೇಶ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಆರ್. ಹರೀಶ್. ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎನ್. ಸಿ.ಕೃಷ್ಣಮೂರ್ತಿ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಎಂ.ಎಸ್. ರಾಜೇಶ್, ಆರಕ್ಷಕ ಉಪನಿರೀಕ್ಷಕಿ ಎಸ್. ಎಸ್. ಅನ್ನಪೂರ್ಣ, ತಾಲ್ಲೂಕು ನಾಯಕ ಸಮುದಾಯದ ಮಹಿಳಾ ಸಂಘದ ಅಧ್ಯಕ್ಷೆ ಸುನಂದಮ್ಮ, ದಲಿತ ಸಂಘರ್ಷ ಸಮಿತಿ ಮುಖಂಡರಾದ ಮುಳುಕಟ್ಟಿ ಶಿವರಾಮಯ್ಯ, ಕಂಚಿನ ಕೋಟೆ ಮೂರ್ತಿ. ಹುರಳಿಗಂಗನಹಳ್ಳಿ ಮಹದೇವ್, ಮಾಚನಾಯಕನಹಳ್ಳಿ ನಾಗರಾಜ್, ಬದರಿ ಕೊಪ್ಪಲು ಚಂದ್ರಶೇಖರ್ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ನಾಯಕ ಸಮಾಜದ ಎಲ್ಲಾ ಮುಖಂಡರುಗಳು ಉಪಸ್ಥಿತರಿದ್ದರು
—————-ಬಿ.ಹೆಚ್. ರವಿ ನಾಗಮಂಗಲ