ನಂಜನಗೂಡು-ಹೆಡತಲೆ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 155ನೇ ಗಾಂಧಿಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ನಂಜನಗೂಡು-ತಾಲ್ಲೂಕಿನ ಹೆಡತಲೆ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 155ನೇ ಗಾಂಧಿಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನೆರವೇರಿಸಲಾಯಿತು.
ಸಹ ಶಿಕ್ಷಕರಾದ ಗಂಗಾಧರ್ ಕಾರ್ಯಕ್ರಮ ಕುರಿತು ಮಾತನಾಡಿದರು.
ಗಾಂಧಿಯವರ ಸರಳ ಜೀವನ ಹಾಗೂ ಅವರ ಅಹಿಂಸಾ ತತ್ವಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಲು ಪ್ರೇರೇಪಿಸಲಾಯಿತು.
ಗಾಂಧಿಯವರ ಆಶಯದಂತೆ ಸ್ವಚ್ಛಭಾರತ ಅಭಿಯಾನದ ಅಡಿಯಲ್ಲಿ ಸಹ ಶಿಕ್ಷಕರಾದ ದೇವಿಕ ಹಾಗೂ ಪೃಥ್ವಿ ಹೆಚ್.ಜಿ ಇವರ ನೇತೃತ್ವದಲ್ಲಿ ವಿದ್ಯಾರ್ಥಿಗಳನ್ನು ತಂಡಗಳಾಗಿ ವಿಂಗಡಿಸಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.ಗ್ರಾಮದ ಭಂಗೀಮಾರಮ್ಮ ದೇವಸ್ಥಾನದ ಆವರಣದಲ್ಲಿ ಶಿಕ್ಷಕರನ್ನೂ ಒಳಗೊಂಡಂತೆ ವಿದ್ಯಾರ್ಥಿಗಳೊಂದಿಗೆ ಶ್ರಮದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿಯರಾದ ಶ್ರೀಮತಿ ರಾಜಮ್ಮ, ಎಸ್ಅ ಡಿ ಎಂ ಸಿ ಅಧ್ಯಕ್ಷರಾದ ರಾಜೇಶ್ವರಿ,ಉಪಾಧ್ಯಕ್ಷರಾದ ಸಂಪತ್ತು , ಸದಸ್ಯರಾದ ಮಂಜಣ್ಣ, ಸಹ ಶಿಕ್ಷಕರುಗಳಾದ ಮಧುಸೂದನ್, ಮಹದೇವಸ್ವಾಮಿ, ವಿಜಯಲಕ್ಷ್ಮಿ ಹಾಗೂ ಭಾರತಿಯವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.