ನಂಜನಗೂಡು:ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾಗೆ 50 ವರ್ಷ ತುಂಬಿದ್ದು, ಜನವರಿ ತಿಂಗಳಿನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ ಎಂದು ಮಾಜಿನಗರ ಪಾಲಿಕಾ ಸದಸ್ಯರಾದ ಮಾ ವಿ ರಾಮ್ ಪ್ರಸಾದ್ ಹೇಳಿದರು.
ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ನಂಜನಗೂಡಿನ ಹುರ ಗ್ರಾಮದಲ್ಲಿ ಬ್ರಾಹ್ಮಣರ ಮಂಡಳಿಯ 2025ರ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಮಾವೇಶದ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ಯಾವುದೇ ಪಕ್ಷದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಸೂಕ್ತ ಸ್ಥಾನಮಾನ, ಪ್ರಾತಿನಿಧ್ಯ ಹಾಗೂ ಪ್ರಾಶಸ್ತ್ರ ದೊರೆಯುತ್ತಿಲ್ಲ. ಅಸಡ್ಡೆಯಿಂದ ಕಾಣಲಾಗುತ್ತಿದೆ. ವಿಪ್ರ ಸಮುದಾಯದ ಒಗ್ಗಟ್ಟು ಪ್ರದರ್ಶನ, ಜನರಲ್ಲಿ ಜಾಗೃತಿ ಮೂಡಿಸಲು ಸಮಾವೇಶ ಉತ್ತಮ ವೇದಿಕೆಯಾಗಲಿದೆ ಹೆಚ್ಚಿನ ಸಂಖ್ಯೆಯಲ್ಲಿ ವಿಪ್ರರು ಭಾಗವಹಿಸಬೇಕೆಂದು ಮನವಿ ಮಾಡಿದರು
ಮಾಜಿನಗರ ಪಾಲಿಕಾ ಸದಸ್ಯರಾದ ಎಂ ಡಿ ಪಾರ್ಥಸಾರಥಿ ಮಾತನಾಡಿ ‘ನಮ್ಮ ಭವ್ಯ ಪರಂಪರೆ ಮೆಲುಕು ಹಾಕುತ್ತಾ, ಮುಂದಿನ ಐವತ್ತು ವರ್ಷಗಳಿಗೆ ಸುಭದ್ರ ಅಡಿಪಾಯ ಹಾಕಬೇಕು. ಯುವ ಸಮೂಹವನ್ನು ಮುನ್ನೆಲೆಗೆ ತರಬೇಕು. ವಿವಿಧ ಕ್ಷೇತ್ರಗಳ ಗಣ್ಯರ ಜತೆ ಸಂವಾದ, ಉದ್ಯೋಗ ಮೇಳ ಹಾಗೂ ಸ್ವಂತ ಉದ್ದಿಮೆ ಪ್ರಾರಂಭಿಸುವವರಿಗೆ ‘ನಿಮ್ಮ ಆಲೋಚನೆ-ನಮ್ಮ ಹಣ’ ಘೋಷಣೆಯಡಿ ಆರ್ಥಿಕ ಸೌಲಭ್ಯ ಕಲ್ಪಿಸುವುದೂ ಸೇರಿ ಹಲವು ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ವಿವರಿಸಿದರು.
ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್,ಸುಚಿಂದ್ರ, ಎಚ್ ಎಸ್ ಸತೀಶ, ಎನ್ ವಲ್ಲೀಶ,ಎಚ್ ಎಸ್ ಸತೀಶ, ಎಚ್ ಸಿ ರಾಜೇಂದ್ರ ಶರ್ಮ, ಎಚ್ ಎಸ್ ನಾಗರಾಜ್, ಎಂ ಆರ್ ವೆಂಕಟೇಶ್ ಹಾಗೂ ಇನ್ನಿತರರು ಹಾಜರಿದ್ದರು.
——-ಮಧುಕುಮಾರ್