ಚಿಕ್ಕಮಗಳೂರು:– ಬಡವರ ಹಕ್ಕಿಗಾಗಿ ಹಾಗೂ ಶೋಷಿತ ಸಮುದಾಯಕ್ಕೆ ನ್ಯಾಯ ಒದ ಗಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪಕ್ಷವನ್ನು ಸದೃಡಗೊಳಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಎ.ಎಂ.ಪ್ರದೀಪ್‌ಕುಮಾರ್ ಹೇಳಿದರು.
ನಗರದ ಅಂಬೇಡ್ಕರ್ ಭವನದಲ್ಲಿ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಜಿಲ್ಲಾ ನೂತನ ಪದಾಧಿಕಾರಿಗಳ ಪದ ಗ್ರಹಣ ಕಾರ್ಯಕ್ರಮವನ್ನು ಈಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.
ಬಡವರು, ರೈತರು ಹಾಗೂ ಮಹಿಳೆಯರ ಮೂಲಸೌಲಭ್ಯಕ್ಕೆ ಪಕ್ಷವು ಸನ್ನದ್ಧವಾಗಿದೆ. ಆ ನಿಟ್ಟಿನಲ್ಲಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಪಕ್ಷವು ಸ್ಥಾಪಿತಗೊಂಡಿದೆ. ಅದರಂತೆ ಇಂದು ಚಿಕ್ಕಮಗಳೂರು ಜಿಲ್ಲಾ ಧ್ಯಕ್ಷರನ್ನು ನೇಮಿಸುವ ಮೂಲಕ ಸಮಾಜಸೇವೆ ಕಾರ್ಯಕ್ಕೆ ಮುಂದಾಗುತ್ತಿದ್ದೇವೆ ಎಂದರು.
ಜಿಲ್ಲೆಯಲ್ಲಿ ನೂತನ ಪದಾಧಿಕಾರಿಗಳು ಪಕ್ಷವನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ಯಲಿ ಎಂದು ಆಶಿ ಸಿದ ಅವರು ಮುಂದಿನ ದಿನಗಳಲ್ಲಿ ರಾಜ್ಯದ ಮೂರನೇ ಅತಿದೊಡ್ಡ ಪಕ್ಷವಾಗಿ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಹೊರಹೊಮ್ಮುವ ಮೂಲಕ ರಾಜ್ಯದ ವಿದ್ಯಾರ್ಥಿಗಳ, ಕಾರ್ಮಿಕರ ಪರವಾಗಿ ನಿರಂತರವಾಗಿ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.

ಎನ್‌ಸಿಪಿ ರಾಜ್ಯ ಕಾರ್ಯದರ್ಶಿ ವಿಜಯಲಕ್ಷ್ಮೀ ಮಾತನಾಡಿ ಜನಸಾಮಾನ್ಯರ ಏಳಿಗೆಗೆ ಹಾಗೂ ರೈತರ ಧ್ವನಿಯಾಗಿ ಪಕ್ಷವು ಸ್ಥಾಪನೆಗೊಂಡಿದೆ. ಮುಂದಿನ ದಿನದಲ್ಲಿ ಎಲ್ಲಾ ರೀತಿಯ ಹೋರಾಟಗಳಲ್ಲಿ ಭಾಗಿಯಾಗಿ ನೊಂದವರು, ಭೂಹೀನರಿಗೆ ಸ್ಪಂದಿಸುವ ಜೊತೆಗೆ ಅಂಬೇಡ್ಕರ್ ಆಶಯದಂತೆ ನಡೆದುಕೊಳ್ಳಲಿದ್ದೇವೆ ಎಂದು ಹೇಳಿದರು.
ನೂತನ ಜಿಲ್ಲಾಧ್ಯಕ್ಷ ಪಿ.ಆರ್.ವಿನೋದ್‌ಕುಮಾರ್ ಮಾತನಾಡಿ ರಾಜ್ಯನಾಯಕರ ಆಶಯದಂತೆ ಜಿಲ್ಲೆ ಯಲ್ಲಿ ಪಕ್ಷವನ್ನು ಸಧೃಡಗೊಳಿಸಲು ಪ್ರತಿ ತಾಲ್ಲೂಕು, ಹೋಬಳಿ, ಗ್ರಾಮ ಹಾಗೂ ನಗರದ ವಾರ್ಡ್ ಮಟ್ಟದಲ್ಲಿ ಪದಾಧಿಕಾರಿಗಳನ್ನು ಆಯ್ಕೆಗೊಳಿಸಲಾಗುವುದು. ಅಲ್ಲದೇ ಮುಂಬರುವ ಚುನಾವಣೆಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಜಿಲ್ಲೆಯಲ್ಲಿ ಪಕ್ಷವನ್ನು ಬಲಿಷ್ಟಗೊಳಿಸುತ್ತೇವೆ ಎಂದರು.

ಇದೇ ವೇಳೆ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡು ಪಿ.ಆರ್.ವಿನೋದ್‌ಕುಮಾರ್ ಅವರಿಗೆ ರಾಜ್ಯಾಧ್ಯಕ್ಷ ಎ.ಎಂ.ಪ್ರದೀಪ್‌ಕುಮಾರ್ ಪ್ರಮಾಣಪತ್ರ ವಿತರಿಸುವ ಮೂಲಕ ಆಯ್ಕೆ ಮಾಡಿದರು.
ಈ ಸಂದರ್ಭದಲ್ಲಿ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯದರ್ಶಿ ಪುಟ್ಟಬ್ಬ, ವಕ್ತಾರ ಗಿರಿಧರ್, ಬೆಂಗಳೂರು ನಗರ ಅಧ್ಯಕ್ಷ ನಾಗರಾಜ್ ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.
- ಸುರೇಶ್ ಎನ್ ಚಿಕ್ಕಮಗಳೂರು