ಸಕಲೇಶಪುರ;ಬಸ್ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಸರಕಾರಕ್ಕೆ ಪ್ರಸ್ತಾವನೆ-ಶಾಸಕ ಸಿಮೆಂಟ್ ಮಂಜು

ಗ್ರಾಮೀಣ ಹಾಗೂ ಹೊರ ಜಿಲ್ಲೆಗಳ ನೂತನ ಬಸ್ ಮಾರ್ಗಗಳಿಗೆ ಚಾಲನೆ

ಸಕಲೇಶಪುರ;ಸಕಲೇಶಪುರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಇಲ್ಲಿನ ರಾಜ್ಯ ರಸ್ತೆ ಸಾರಿಗೆ ನಿಗಮದ ಸಕಲೇಶಪುರ ಡಿಪೋದಿಂದ ಗ್ರಾಮೀಣ ಹಾಗೂ ಹೊರ ಜಿಲ್ಲೆಗಳ ನೂತನ ಬಸ್ ಮಾರ್ಗಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸಕಲೇಶಪುರ ಈಗ ಸಾಕಷ್ಟು ಬೆಳೆದಿದ್ದು ಬಸ್ ಪ್ರಯಾಣಿಕರ ಸಂಖ್ಯೆಯಲ್ಲೂ ಬಹಳಷ್ಟು ಏರಿಕೆ ಕಂಡಿದೆ.ಬಸ್ಸುಗಳ ಸಂಖ್ಯೆಯು ಹೆಚ್ಚಾಗಿದ್ದು ಒಂದು ವಿಸ್ತಾರವಾದ ಸುಸಜ್ಜಿತ ಬಸ್ ನಿಲ್ದಾಣದ ಅವಶ್ಯಕತೆಯಿದೆ.ಮುಖ್ಯಮಂತ್ರಿಗಳಿಗೆ ಹಾಗು ಸಾರಿಗೆ ಸಚಿವರಿಗೆ ಹೊಸ ಬಸ್ ನಿಲ್ದಾಣದ ನಿರ್ಮಾಣಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

ಸಾರ್ವಜನಿಕರ ಬಹು ದಿನಗಳ ಬೇಡಿಕೆಯಾಗಿದ್ದ ವಳಲಹಳ್ಳಿ,ಕರಡಿಗಾಲ,ಬೊಮ್ಮನಕೆರೆ,ವಡ್ರಹಳ್ಳಿ,ಹರಗರಹಳ್ಳಿ, ನಡನಹಳ್ಳಿ,ನೂದರಹಳ್ಳಿ,ಮೂಲಕ ಸಕಲೇಶಪುರ ಕಡೆ ಹೋಗುವ ಮಾರ್ಗಕ್ಕೆ ಇಂದು ಚಾಲನೆ ನೀಡಲಾಗಿದೆ.ಕಳೆದ ಕೋವಿಡ್ ಸಂಧರ್ಭದಲ್ಲಿ ತಾಲೂಕಿನಲ್ಲಿ ಕೆಲವು ಗ್ರಾಮೀಣ ಪ್ರದೇಶಕ್ಕೆ ಬಸ್ ಗಳ ಮಾರ್ಗಗಳನ್ನು ಸ್ಥಗಿತಗೊಳಿಸಲಾಗಿತ್ತು ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳಿಂದ ಬಸ್ ಸೌಲಭ್ಯಕ್ಕೆ ಬೇಡಿಕೆ ಬಂದ ಕಾರಣ 11 ಹೊಸ ಅಶ್ವಮೇಧ ಬಸ್ ಗಳು ಬಂದಿದ್ದು ಆಗತ್ಯಕ್ಕೆ ಅನುಗುಣವಾಗಿ ಮಾರ್ಗಗಳಿಗೆ ಬಸ್ ವ್ಯವಸ್ಥೆ ಮಾಡಲಾಗುವುದು ಎಂದರು.ಈಗಾಗಲೇ ಕ್ಷೇತ್ರದಿಂದ ವಿವಿಧೆಡೆ ಸಂಚರಿಸುವ ಹಳೆ ಬಸ್‌ಗಳನ್ನು ಬದಲಾವಣೆ ಮಾಡಲು ಹಾಗೂ ಹೊಸ ಬಸ್‌ಗಳನ್ನು ಬಿಡುವಂತೆ ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಲಾಗಿದೆ.ಸಾರ್ವಜನಿಕರು ಕರ್ನಾಟಕ ರಾಜ್ಯ ಸಾರಿಗೆ ಬಸ್‌ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಸಕಲೇಶಪುರ ಡಿಪೋ ವ್ಯವಸ್ಥಾಪಕರಾದ ಬಿಪಿನ್,ಪುರಸಭಾ ಸದಸ್ಯರಾದ ಪ್ರದೀಪ್ ಕಮಲಮ್ಮ, ತಾಲೂಕು ಬಿಜೆಪಿ ಅಧ್ಯಕ್ಷ ವಳಲಹಳ್ಳಿ ಅಶ್ವಥ್ ಮುಖಂಡರಾದ, ರಾಜಕುಮಾರ್, ಪುನೀತ್, ವಿರೇಶ್ ಮಂಜುನಾಥ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

× How can I help you?