ನವದೆಹಲಿ:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಭಾರತೀಯ ಮಧ್ಯಮ ವರ್ಗದವರ ಅಶೋತ್ತರಗಳಿಗೆ ಸ್ಪಂದಿಸುವ ಬಜೆಟ್, ಭಾರತೀಯ ಆರ್ಥಿಕತೆಗೆ ಆದ್ಯತೆ ನೀಡಿದ ಬಜೆಟ್ ಮತ್ತು ಮಾನ್ಯ ಪ್ರಧಾನ ಮಂತ್ರಿಗಳ ವಿಕ್ಸಿತ್ ಭಾರತ್ ಕನಸನ್ನು ಸಾಕಾರ ಮಾಡುವ ಬಜೆಟ್ ಎಂದು ಕೇಂದ್ರ ಜಲಶಕ್ತಿ ಮತ್ತು ರೇಲ್ವೆ ಖಾತೆಯ ರಾಜ್ಯ ಸಚಿವ ಶ್ರೀ ವಿ. ಸೋಮಣ್ಣ ಬಣ್ಣಸಿದ್ದಾರೆ.
ಕೇಂದ್ರ ಬಜೆಟ್ ಬಗ್ಗೆ ಮಾತನಾಡಿದ ಅವರು, ಭಾರತ ಕೃಷಿಕರ ದೇಶ, ಕೃಷಿಕರ ಎಳಿಗೆಗೆ ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆಯನ್ನು 2025-26 ರ ಬಜೆಟ್‌ನಲ್ಲಿ ಘೋಷಿಸಲಾಗಿದೆ, ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಲಾಗಿದೆ. 10 ಸಾವಿರ ವೈದ್ಯಕೀಯ ಸೀಟನ್ನು ಹೆಚ್ಚುವರಿಯಾಗಿ ಈ ಬಜೆಟ್‌ನಲ್ಲಿ ನೀಡಲಾಗಿದೆ. 36 ಜೀವ ರಕ್ಷಕ ಔಷಧಗಳಿಗೆ ಸಂಪೂರ್ಣ ಸುಂಕ ವಿನಾಯತಿ ನೀಡಲಾಗಿದೆ. ದೇಶಿಯ ಜೀವರಕ್ಷಕ ಔಷಧ ತಯಾರಿಕೆಗೆ ಸುಂಕ ವಿನಾಯಿತಿ ಮೂಲಕ ಉತ್ತೇಜನ ನೀಡಲಾಗಿದೆ ಎಂದ ಅವರು,
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಹಿಳಾ ಉದ್ಯಮದಾರರಿಗೆ ಆರ್ಥಿಕ ಸೌಲಭ್ಯ ಒದಗಿಸುವ ನೂತನ ಯೋಜನೆ ಜಾರಿಗೊಳಿಸಲಾಗಿದೆ. ಗ್ರಾಮೀಣ ಭಾಗದ ಎಲ್ಲಾ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಗಳಿಗೆ ಬ್ರಾಡ್-ಬ್ಯಾಂಡ್ ಸಂಪರ್ಕ ನೀಡಲು ಈ ಬಜೆಟ್ ನಲ್ಲಿ ಅವಕಾಶ ನೀಡಲಾಗಿದೆ. ಹಳ್ಳಿಗಳ ಅಭಿವೃದ್ದಿಗೆ ಆದ್ಯತೆ ನೀಡಿ ಭಾರತೀಯ ಅಂಚೆ ನವೀಕರಿಸುವ ಮೂಲಕ ಗ್ರಾಮೀಣ ಭಾಗದ 1.5 ಲಕ್ಷ ಅಂಚೆ ಕೇಂದ್ರಗಳನ್ನು ಅಭಿವೃದ್ಧಿ ಮಾಡಲಾಗುವುದು ಇದು ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಒತ್ತು ನೀಡಿದ ಬಜೆಟ್ ಎಂದು ಕೇಂದ್ರ ಸಚಿವ ವಿ. ಸೋಮಣ್ಣನವರು ತಿಳಿಸಿದ್ದಾರೆ.
ರೇಲ್ವೆ ಸುರಕ್ಷತೆಗೆ ಕವಚ್ 4ಓ ಯೋಜನೆ ಜಾರಿಗೊಳಿಸಿದೆ. ಈ ಬಗ್ಗೆ ಪ್ರಯೋಗ ನೆಡಸಲಾಗಿದೆ. ಕವಚ್ ದೇಶಿಯ ತಂತ್ರಜ್ಷಾನ ಆಧಾರಿತವಾಗಿದೆ ಮತ್ತು ಪರೀಕ್ಷೆ ಯಶಸ್ವಿಯಾಗಿದೆ. ಸುಮಾರು ೧೦,೦೦೦ ರೇಲ್ವೆ ಇಂಜಿನ್ ಗಳಿಗೆ ಕವಚ್ ಅಳವಡಿಸಲಾಗುವುದು. ಈ ಕಾರ್ಯ ಪ್ರಗತಿಯಲ್ಲಿದೆ. ನವದೆಹಲಿ-ಮುಂಬೈ ಮತ್ತು ನವದೆಹಲಿ-ಕಲ್ಕತ್ತಾ ಮಾರ್ಗದಲ್ಲಿ ಡಿಸೆಂಬರ್ ೨೦೨೫ರಲ್ಲಿ ಕವಚ್ ಅಳವಡಿಕೆ ಮುಗಿಯಲಿದೆಯೆಂದು ಎಂದು ಹೇಳಿದರು.
-ಕೆ.ಬಿ.ಚಂದ್ರಚೂಡ್