ಕೆ.ಆರ್.ಪೇಟೆ-ತಾಲೂಕಿನ ಕಸಬಾ ಹೋಬಳಿಯ ವಡ್ಡರಹಳ್ಳಿ ಗ್ರಾಮದ ಹಿರಿಯ ಮುಖಂಡ ಪಟೇಲ್ ಜಯಶಂಕರ (84) ರವರು ಬುದುವಾರ ಸಂಜೆ 5:00 ಸಮಯದಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶ್ರೀಯುತರು ಪತ್ನಿ ರಾಜಮಣಿ ಐದು ಜನ ಗಂಡು ಮಕ್ಕಳು, ಓರ್ವ ಹೆಣ್ಣು ಮಗಳು ಸೇರಿದಂತೆ ಅಪಾರ ತುಂಬಿದ ಬಂಧು ಬಳಗ ಬಿಟ್ಟು ವಿಧಿವಶರಾಗಿದ್ದಾರೆ.
ಮೃತರ ಅಂತ್ಯಸಂಸ್ಕಾರವು ಸ್ವಗ್ರಾಮದಲ್ಲಿರುವ ಜಮೀನಿನಲ್ಲಿ ಗುರುವಾರ ಮಧ್ಯಾಹ್ನ 1 ಗಂಟೆಗೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಶಾಸಕ ಹೆಚ್.ಟಿ ಮಂಜು,ಮಾಜಿ ಸಚಿವ ಕೆ.ಸಿ ನಾರಾಯಣಗೌಡ,ಮಾಜಿ ಶಾಸಕರಾದ ಕೆ.ಬಿ ಚಂದ್ರಶೇಖರ್,ಬಿ. ಪ್ರಕಾಶ್,ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಬಿ.ಎಲ್ ದೇವರಾಜು, ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್,ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ನಿರ್ದೇಶಕ ಡಾಲು ರವಿ, ಜಿ.ಪಂ ಮಾಜಿ ಉಪಾಧ್ಯಕ್ಷ ಕೆ. ಎಸ್ ಪ್ರಭಾಕರ್,ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್,ಕಾಂಗ್ರೆಸ್ ಮುಖಂಡ ಬೂಕನಕೆರೆ ವಿಜಯ ರಾಮೇಗೌಡ, ರಾಜ್ಯ ಸಹಕಾರ ಮಹಾಮಂಡಳಿ ನಿರ್ದೇಶಕ ಶೀಳನೆರೆ ಮೋಹನ್,ಜೆಡಿಎಸ್ ಅಧ್ಯಕ್ಷ ಜಾನಕಿರಾಮ್ ,ಬಿಜೆಪಿ ಅಧ್ಯಕ್ಷ ಸಾರಂಗಿ ನಾಗಣ್ಣ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ್,ಐಪನಹಳ್ಳಿ ನಾಗೇಂದ್ರ ಕುಮಾರ್,ಎಂ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಹೊಸಹೊಳಲು ಅಶೋಕ್,ಪುರಸಭಾ ಅಧ್ಯಕ್ಷೆ ಪಂಕಜಾ ಪ್ರಕಾಶ್,ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ತಾಲೂಕು ನಿಕಟ ಪೂರ್ವ ಅಧ್ಯಕ್ಷ ವಿ.ಎಸ್ ಧನಂಜಯ್ ಕುಮಾರ್,ಜೆಡಿಎಸ್ ರಾಜ್ಯ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕುರುಬಹಳ್ಳಿ ನಾಗೇಶ್,ಮನ್ಮುಲ್ ಮಾಜಿ ಅಧ್ಯಕ್ಷ ಎಂ.ಬಿ ಹರೀಶ್,ಜಿಲ್ಲಾ ಜೆ.ಡಿ.ಎಸ್ ಪ್ರಧಾನ ಕಾರ್ಯದರ್ಶಿ ಬಿ.ಎಂ ಕಿರಣ್ ಕುಮಾರ್,ಟಿಎಪಿಸಿಎಂಎಸ್ ನಿರ್ದೇಶಕ ಬಲದೇವ್,ಕೊರಟಿಕೆರೆ ದಿನೇಶ್,ಪುರಸಭಾ ಸದಸ್ಯರಾದ ಹೆಚ್.ಆರ್ ಲೋಕೇಶ್,ಸದಸ್ಯ ಕೆ.ಸಿ ಮಂಜುನಾಥ್,ಡಿ.ಪ್ರೇಮ್ ಕುಮಾರ್,ಬಸ್ ಸಂತೋಷ್ ಕುಮಾರ್,ನಟರಾಜ್,ತಾ.ಪಂ ಮಾಜಿ ಉಪಾಧ್ಯಕ್ಷ ಎಂ.ಸಿ ರಾಮೇಗೌಡ,ಮಾಜಿ ಸದಸ್ಯೆ ಚಂದ್ರಕಲಾ ಮಂಜುನಾಥ್,ಮಾಕವಳ್ಳಿ ಗ್ರಾ.ಪಂ ಅಧ್ಯಕ್ಷೆ ಸಾಕಮ್ಮ,ಸದಸ್ಯರಾದ ಮಂಜುನಾಥ್, ಶೀಲಾ,ವಡ್ಡರಹಳ್ಳಿ ಮುಖಂಡರಾದ ನಿವೃತ್ತ ಶಿಕ್ಷಕ ಗುರುವಯ್ಯ,ಸಿದ್ದಲಿಂಗಪ್ಪ,ನಾಗರಾಜು, ನಂಜುಂಡಪ್ಪ, ಬಾಲಕೃಷ್ಣ,ವಿ. ಎಂ ಕುಮಾರ್, ಮೋಹನ್ ಕುಮಾರ್,ಬಾಂಬೆ ಸುರೇಶ್,ಶಿವಕುಮಾರ್,ಶ್ರೀನಿವಾಸಗೌಡ ,ಧನಂಜಯ್, ವಿಷಕಂಠ,ಮಂಜುನಾಥ್,ಸೇರಿದಂತೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
————–ಮನು ಮಾಕವಳ್ಳಿ ಕೆ ಆರ್ ಪೇಟೆ