ಅರಕಲಗೂಡು – ತಾಲೂಕು ಹಂಡ್ರಂಗಿ ಗ್ರಾಮ ಪಂಚಾಯಿತಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ಯನ್ನು ಶಾಸಕರಾದ *ಎ ಮಂಜು ರವರು ನೇರವೇರಿಸಿದರು.
ನಂತರ ಮಾತನಾಡಿದ ಅವರು, ಪ್ರಾಥಮಿಕ ಸಹಕಾರ ಸಂಘಗಳು ರೈತರಿಗೆ ತುಂಬಾ ಅನುಕೂಲಕರವಾದ ವಾತಾವರಣವನ್ನು ನಿರ್ಮಿಸುತ್ತಿದೆ ಆದ್ದರಿಂದ ಪ್ರಾಥಮಿಕ ಸಹಕಾರ ಸಂಘಗಳನ್ನು ಉಪಯೋಗಿಸಿಕೊಂಡು ಉತ್ತಮ ಜೀವನ ನಡೆಸಬೇಕು ಮತ್ತು ಈ ಕಾಮಗಾರಿಗೆ 5 ಲಕ್ಷ ರೂಪಾಯಿಗಳನ್ನು ಕೊಡುವುದಾಗಿ ಘೋಷಣೆ ಮಾಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಸದಸ್ಯರು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಎಲ್ಲಾ ನಿರ್ದೇಶಕರು ಗ್ರಾಮದ ಎಲ್ಲಾ ಮುಖಂಡರು ಉಪಸ್ಥಿತರಿದ್ದರು