ಮೈಸೂರು-ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ
‘ಒಂದು ದೇಶ ಒಂದು ಚುನಾವಣೆ’ ಕೇಂದ್ರ ಸರ್ಕಾರದ ಐತಿಹಾಸಿಕ ತೀರ್ಮಾನ ಸ್ವಾಗತಿಸಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಅಂಗವಾಗಿ ಮಕ್ಕಳಿಗೆ ಪುಸ್ತಕ ಹಾಗೂ ಸಿಹಿ ವಿತರಿಸಿ ಸಂಭ್ರಮಿಸಲಾಯಿತು.
ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷರಾದ ಜೋಗಿ ಮಂಜು ಮಾತನಾಡಿ,ಭಾರತೀಯ ಚುನಾವಣಾ ವ್ಯವಸ್ಥೆ ಸುಧಾರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಐತಿಹಾಸಿಕ ಹೆಜ್ಜೆ ಇರಿಸಿದ್ದಾರೆ.ಸಾರ್ವಜನಿಕರ ಹಣ ಹಾಗು ಸಮಯ ಎರಡನ್ನು ಉಳಿಸುವ ಈ ನಿರ್ಧಾರಕ್ಕೆ ವಿರೋಧ ಪಕ್ಷಗಳು ಬೆಂಬಲ ನೀಡಬೇಕು ಎಂದರು.
ಮಾಜಿನಗರಪಾಲಿಕ ಎಂ.ಡಿ ಪಾರ್ಥಸಾರಥಿ ಮಾತನಾಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶ ಕಂಡ ಅತ್ಯಂತ ಶ್ರೇಷ್ಠ ಪ್ರಧಾನಿ.ಅವರ ನಾಯಕತ್ವದಲ್ಲಿ ಭಾರತ ವಿಶ್ವದಲ್ಲೇ ಅತ್ಯಂತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ.ಅಂತಹವರ ಹುಟ್ಟು ಹಬ್ಬದ ಆಚರಣೆಯನ್ನು ಅಪೂರ್ವ ಸ್ನೇಹ ಬಳಗದ ಪದಾಧಿಕಾರಿಗಳು ಮಕ್ಕಳಿಗೆ ಪುಸ್ತಕ ಹಾಗು ಸಿಹಿ ಹಂಚುವ ಹಮ್ಮಿಕೊಂಡಿರುವುದು ಅಭಿನಂದನೀಯ ಎಂದು ಸಂತಸ ವ್ಯಕ್ತಪಡಿಸಿದರು.
ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ ಬಿಜೆಪಿ ಆಡಳಿತದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗಿದೆ. ಮೋದಿ ನೇತೃತ್ವದ ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿ ಕೋಮು ಗಲಭೆಗಳು,ನಾಗರಿಕರಿಗೆ ತೊಂದರೆ ಆಗು ವಂತಹ ಘಟನೆಗಳು,ಉಗ್ರಗಾಮಿ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗಿದೆ.ಹಾಗಾಗಿಯೇ ದೇಶದ ಜನರು ಅವರನ್ನು 3ನೇ ಬಾರಿಗೆ ಅವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದಾರೆ ಎಂದರು.
ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್,ಚಕ್ರಪಾಣಿ,ಸುಚೇಂದ್ರ,ಕೃಷ್ಣೆಗೌಡ,ಶಾಲೆಯ ಮುಖ್ಯ ಶಿಕ್ಷಕರಾದ ಸುಗುಣಾವತಿ,ಆನಂದ್,ರಾಕೇಶ್,ಹಾಗೂ ಇನ್ನಿತರರು ಭಾಗವಹಿಸಿದ್ದರು.
————ಮಧುಕುಮಾರ್