ತುಮಕೂರು : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಏ.26 ರಿಂದ ಜೂ. 4ರವರೆಗೆ ಜಾನುವಾರುಗಳಿಗಾಗಿ ಹಮ್ಮಿಕೊಳ್ಳಲಾಗುವ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪೋಸ್ಟರ್ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ: ಗಿರೀಶ್ ಬಾಬು ರೆಡ್ಡಿ, ಇಲಾಖೆಯ ವಿವಿಧ ತಾಲ್ಲೂಕಿನ ಸಹಾಯಕ ನಿರ್ದೇಶಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.