ಚಿಕ್ಕಮಗಳೂರು-ಪರೀಕ್ಷಾ-ಕೇಂದ್ರಗಳ-ಸುತ್ತ-ನಿಷೇಧಾಜ್ಞೆ

ಚಿಕ್ಕಮಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಪ್ರವೇಶ ಪರೀಕ್ಷೆಯನ್ನು ಫೆಬ್ರವರಿ 15 ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು, ಚಿಕ್ಕಮಗಳೂರು, ಸರ್ಕಾರಿ ಪದವಿ ಪೂರ್ವ ಕಾಲೇಜು, ತರೀಕೆರೆ, ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜು, ತರೀಕೆರೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಮೂಡಿಗೆರೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಕಡೂರು ಎನ್.ಹೆಚ್.೨೦೬, ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜು, ಕಡೂರು, ಬಿ.ಜಿ.ಎಸ್. ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು, ಕಡೂರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಪೊಲೀಸ್ ಸ್ಟೇಷನ್ ಹಿಂಭಾಗ, ಕೊಪ್ಪ ಈ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯಲಿದೆ.

ಪರೀಕ್ಷೆ ಸುವ್ಯವಸ್ಥಿತವಾಗಿ ಶಾಂತಿ ಮತ್ತು ಶಿಸ್ತು ಪಾಲನೆ, ಗೌಪ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಪರೀಕ್ಷಾ ಕೇಂದ್ರಗಳ ಸುತ್ತ ಮಧ್ಯಾಹ್ನ 12.00 ಗಂಟೆಯಿಂದ ಸಂಜೆ 06.00 ಗಂಟೆಯ ವರೆಗೆ ಪರೀಕ್ಷಾ ಕೇಂದ್ರಗಳು ಮತ್ತು ಸುತ್ತಮುತ್ತ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತ ಇರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷೆ ನಡೆಯುವ ಸಮಯದಲ್ಲಿ ಕಡ್ಡಾಯವಾಗಿ ಮುಚ್ಚುವುದು. ಈ ನಿಷೇಧಿತ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜುಗಳಲ್ಲಿ ಮತ್ತು ಇತರೆ ಶೈಕ್ಷಣಿಕ ಸಂಸ್ಥೆಗಳಲ್ಲಿ ಈ ಪರೀಕ್ಷೆ ಹೊರತುಪಡಿಸಿ ಇತರೆ ರೀತಿಯ ಶೈಕ್ಷಣಿಕ ಚಟುವಟಿಕೆಗಳನ್ನು ಪರೀಕ್ಷಾ ದಿನದಂದು ನಡೆಸಲು ಅವಕಾಶವಿರುವುದಿಲ್ಲ.

ಈ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಭ್ಯರ್ಥಿಗಳು ಪರೀಕ್ಷಾ ಕಾರ್ಯನಿರತ ಅಧಿಕಾರಿ/ಸಿಬ್ಬಂದಿಗಳು ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆಯನ್ನು ಬಳಸುವುದನ್ನು ನಿರ್ಬಂಧಿಸಲಾಗಿದೆ.

ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷಾ ಅಭ್ಯರ್ಥಿಗಳು ಪ್ರವೇಶ ಪತ್ರ ಮತ್ತು ಪರೀಕ್ಷಾ ಕೇಂದ್ರದ ಅಧಿಕಾರಿ/ಸಿಬ್ಬಂದಿಗಳು ಅಧಿಕೃತ ಗುರುತಿನ ದಾಖಲೆಗಳೊಂದಿಗೆ ಮಾತ್ರ ಹಾಜರಾಗಿದ್ದು ಪರೀಕ್ಷಾ ಕರ್ತವ್ಯಗಳನ್ನು ನಿರ್ವಹಿಸಲು ಅವಕಾಶವಿದೆ ಉಳಿದಂತೆ ವಿನಾ ಕಾರಣ ಅಧಿಕಾರಿ/ಸಿಬ್ಬಂದಿಗಳು ಹಾಜರಾಗುವುದನ್ನು ನಿಬಂಧಿಸಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

× How can I help you?