ತುಮಕೂರು: ಗ್ರಾಮಾಂತರ ಕ್ಷೇತ್ರದ ಕೈಗಾರಿಕಾ ಪ್ರದೇಶಗಳಲ್ಲಿ ಹಂತಹಂತವಾಗಿ ಮೂಲಭೂತ ಸೌಲಭ್ಯ ಒದಗಿಸಲಾಗುವುದು. ಅಗತ್ಯ ಸೌಲಭ್ಯಗಳನ್ನು ಒದಗಿಸುವುದರಿಂದ ಕೈಗಾರಿಕೆಗಳ ಬೆಳವಣಿಗೆಗೆ ಸಹಕಾರಿಯಾಗುವುದು ಎಂದು ಶಾಸಕ ಬಿ.ಸುರೇಶ್‌ಗೌಡ ಹೇಳಿದರು.
ತಾಲ್ಲೂಕಿನ ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ರಾಜ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಸಿಂಗೋನಹಳ್ಳಿ-ಪಂಡಿತನಹಳ್ಳಿ ನಡುವಿನ ರಸ್ತೆ ಹಲವು ವರ್ಷಗಳಿಂದ ಹದಗೆಟ್ಟಿದ್ದು, ಅಭಿವೃದ್ಧಿ ಸಾಧ್ಯವಾಗಿರಲಿಲ್ಲ, ಇದರಿಂದ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಕಾಮಗಾರಿಗೆ ಚಾಲನೆ ನೀಡಿದ್ದು, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹಿರೇಹಳ್ಳಿ ಕೈಗಾರಿಕಾ ಪ್ರದೇಶದ ಸಂಪರ್ಕ ರಸ್ತೆಗಳಿಗೆ ಕೆಐಎಡಿಬಿ ವತಿಯಿಂದ 6 ಕೋಟಿ ರೂ. ವೆಚ್ಚದಲ್ಲಿ ರಸ್ತೆ, ಚರಂಡಿ ನಿರ್ಮಾಣ ಮಾಡಲಾಗುತ್ತಿದೆ.ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಬೇಕು, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕೆಂದರು.

ಈ ವೇಳೆ ಕೆಎಐಎಡಿಬಿ ಕಾರ್ಯಪಾಲಕ ಇಂಜಿನಿಯರ್ ಲಕ್ಷ್ಮೇಶ್, ಎಇಇ ರಾಜೇಶ್, ಜೆಇ ಜಯರಾಮ್, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಪ್ಪಣ್ಣ ಭೋವಿ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಂಜುನಾಥ್, ಜೆಇ ಮಂಜುನಾಥ್, ಗುತ್ರಿಗೆದಾರ ರಾಯಸಂದ್ರರವಿಕುಮಾರ್, ಕೈಗಾರಿಕೋದ್ಯಮಿ ಚಂದ್ರಶೇಖರ್, ಮುಖಂಡರಾದ ವೈ.ಹೆಚ್.ಹುಚ್ಚಯ್ಯ, ಗೂಳೂರು ಶಿವಕುಮಾರ್, ರಾಜೇಶ್, ಉಮೇಶ್, ರಾಜಶೇಖರ್, ಆನಂದ್, ಮದನ್ ಮೊದಲಾದವರು ಭಾಗವಹಿಸಿದ್ದರು.