ತುಮಕೂರು : ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಮಿಕ ವಿಭಾಗದ ಮಾನ್ಯ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿಗೌಡರವರ ಆದೇಶದ ಮೇರೆಗೆ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾನ್ಯ ಅಧ್ಯಕ್ಷ ಹೆಚ್.ಜಿ.ಚಂದ್ರಶೇಖರ್ ಗೌಡ ಹಾಗೂ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಮಾನ್ಯ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಹಾಗೂ ಕೆಪಿಸಿಸಿ ಕಾರ್ಮಿಕ ವಿಭಾಗದ ಮಾನ್ಯ ರಾಜ್ಯ ಉಪಾಧ್ಯಕ್ಷ ಡಾ. ವಿ.ಎಸ್.ಸೈಯದ್ ದಾದಾಪೀರ್ ಹಾಗೂ ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮಾನ್ಯ ಅಧ್ಯಕ್ಷ ಸಿ.ಡಿ.ಚಂದ್ರಶೇಖರ್ ಇವರುಗಳ ಶಿಫಾರಸ್ಸಿನ ಮೇರೆಗೆ ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗಕ್ಕೆ ಸುರೇಶ್ ನಾಯಕ್ ಆರ್ ರವರನ್ನು ಬ್ಲಾಕ್ ಅಧ್ಯಕ್ಷರನ್ನಾಗಿ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಅಬ್ದುಲ್ ರಹಿಂ ಜಿ ರವರು ನೇಮಕ ಮಾಡಿದರು.

ಈ ಸಂದರ್ಭದಲ್ಲಿ ಕಾರ್ಮಿಕ ವಿಭಾಗದ ಕಾರ್ಯಾಧ್ಯಕ್ಷರಾದ ಆದಿಲ್ ಬಾಷಾ ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿ ಎಸ್.ಸಿ ಘಟಕದ ಅಧ್ಯಕ್ಷರಾದ ನರಸಿಂಹಮೂರ್ತಿ, ಪವನ್ ಹಾಗೂ ಯಶ್ವಂತ್ ಮುಂತಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.