ತಿಪಟೂರು-ರಾಷ್ಟ್ರದ ಅಭಿವೃದ್ಧಿ ಕಾರ್ಯಗಳಿಗೆ ಭ್ರಷ್ಟಾಚಾರ ಎನ್ನುವ ಪಿಡುಗು ತೊಡಕಾಗಿದೆ-ಉಮಾಶಂಕರ್

ತಿಪಟೂರು-ರಾಷ್ಟ್ರದ ಅಭಿವೃದ್ಧಿ ಕಾರ್ಯಗಳಿಗೆ ಭ್ರಷ್ಟಾಚಾರ ಎನ್ನುವ ಪಿಡುಗು ತೊಡಕಾಗಿದೆ ಎಂದು ಕರ್ನಾಟಕ ಲೋಕಾಯುಕ್ತದ ತುಮಕೂರು ಜಿಲ್ಲಾ ಪೊಲೀಸ್ ಉಪಾಧೀಕ್ಷಕರಾದ ಉಮಾಶಂಕರ್ ಅವರು ತಿಳಿಸಿದರು.

ತಿಪಟೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಘಟಕ ಮತ್ತು ತುಮಕೂರು ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಸಹಯೋಗದಲ್ಲಿ ಇಂದು ಕಾಲೇಜಿನ ಸಭಾಂಗಣದಲ್ಲಿ ನಡೆದ ವಿದ್ಯಾರ್ಥಿಗಳಿಗೆ ಜಾಗೃತಿ ಅರಿವು ಕಾರ್ಯಕ್ರಮದಲ್ಲಿ ಅವರು
ಮಾತನಾಡಿದರು.

ಭ್ರಷ್ಟಾಚಾರ ಇಂದು ಬಹುತೇಕ ಎಲ್ಲ ರಂಗಗಳನ್ನು ವ್ಯಾಪಿಸಿದ್ದು, ಇದರಿಂದ ಸಮಾಜದಲ್ಲಿ ಅಭಿವೃದ್ಧಿ ಮತ್ತು ಪ್ರಾಮಾಣಿಕತೆಗಳು ಮರೆಯಾಗುತ್ತಿವೆ.ಆದ್ದರಿಂದ ವಿದ್ಯಾರ್ಥಿಗಳು ಭ್ರಷ್ಟಾಚಾರ ವಿರೋಧ ಕುರಿತು ಎಲ್ಲೆಡೆ ಜನ ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.

ಸರ್ಕಾರ ಸದಾ ಜನರಿಗಾಗಿ ಶ್ರಮಿಸುತ್ತಿದೆ. ಸರ್ಕಾರದಿಂದ ಯಾವುದೇ ಸೇವೆಯನ್ನು ಪಡೆಯಲು ಸಾರ್ವಜನಿಕರು ಸಕಾಲದಲ್ಲಿ ಅರ್ಜಿ ಸಲ್ಲಿಸಿ ಸೇವೆ ಪಡೆಯಬಹುದು.ನಿರ್ದಿಷ್ಟ ಸಮಯದಲ್ಲಿ ಅಧಿಕಾರಿಗಳು ಸೇವೆ ಒದಗಿಸದೆ ಇರುವುದು ಅಪರಾಧವಾಗಿದೆ. ಅಂತಹ ಅಧಿಕಾರಿಗಳಿಗೆ ಶಿಕ್ಷೆ ಖಂಡಿತ ಆಗುತ್ತದೆ ಎಂದು ಉಮಾಶಂಕರ್ ಅವರು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಹೆಚ್‌.ಬಿ.ಕುಮಾರಸ್ವಾಮಿ ಅವರು ಮಾತನಾಡಿ ಶಿಕ್ಷಕರಾದ ನಾವು ಮುಂದಿನ ದಿನಗಳಲ್ಲಿ ಸಮಾಜವನ್ನು ಕಟ್ಟುವುದು ಹೇಗೆ ಎಂಬ ಚಿಂತೆ ಕಾಡುತ್ತಿದೆ.ಇಂತಹ ಕಾರ್ಯಕ್ರಮಗಳಲ್ಲಿ ನಾವೆಲ್ಲಾ ಪಾಲ್ಗೊಂಡು ಜಾಗೃತರಾದಾಗ ಸಮಾಜದಲ್ಲಿ ಬದಲಾವಣೆ ತರಬಹುದು ಎಂದು ಹೇಳಿದರು.

ಪ್ರಾಧ್ಯಾಪಕರಾದ ಶಿವಕುಮಾರ್, ಪ್ರಕಾಶ್, ಚಿಕ್ಕಹೆಗ್ಗಡೆ ಅವರು ಉಪಸ್ಥಿತರಿದ್ದರು.
ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯದ ಮೇಲೆ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.

Leave a Reply

Your email address will not be published. Required fields are marked *

× How can I help you?