
ತುಮಕೂರು-ಮಹಾನಗರ ಪಾಲಿಕೆ ಆಯುಕ್ತರಾದ ಬಿ.ವಿ.ಅಶ್ವಿಜಾರವರನ್ನು ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಪಿ. ಆರ್. ಕುರಂದವಾಡ, ಕಾರ್ಯದರ್ಶಿ ಟಿ.ಎನ್.ಶ್ರೀಕಂಠ ಸ್ವಾಮಿ,ಖಜಾಂಚಿ ಜಿ.ಆರ್. ಎಸ್.ರವಿಶಂಕರ್ ರವರು ಭೇಟಿ ಮಾಡಿ ತುಮಕೂರು ಜಿಲ್ಲೆಯ ಎಲ್ಲಾ ಕೈಗಾರಿಕೋದ್ಯಮಿಗಳ ಕುಂದು ಕೊರತೆಗಳು ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಚರ್ಚಿಸಿ ಅತಿ ಶೀಘ್ರದಲ್ಲಿ ಪರಿಹರಿಸಿ ಕೊಡಬೇಕೆಂದು ಹಾಗೂ ಕೈಗಾರಿಕಾ ಪ್ರದೇಶಗಳ ಬಾಕಿ ಇರುವ ಅಗತ್ಯ ಮೂಲಭೂತ ಸೌಕರ್ಯಗಳನ್ನು ಅತಿ ಶೀಘ್ರವಾಗಿ ಕಲ್ಪಿಸಿ ಕೊಡಬೇಕೆಂದು ಮನವಿ ಮಾಡಲಾಯಿತು.