
ತುಮಕೂರು:ಗ್ರಾಮಾಂತರ ಯೋಜನಾ ಕಚೇರಿ ವ್ಯಾಪ್ತಿಯ ವಿದ್ಯಾನಗರ ವಲಯದ ದುರ್ಗದ ಹಳ್ಳಿ ಗ್ರಾಮದಲ್ಲಿ ಕೃಷಿ ಯಾಂತ್ರಿಕರಣ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ನೇತ್ರಾವತಿ ರವರು ಉದ್ಘಾಟಿಸಿ ಪೂಜ್ಯರು ಗ್ರಾಮಾಭಿವೃದ್ಧಿ ಯೋಜನೆ ಮೂಲಕ ರೈತರ ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಸಾಕಷ್ಟು ಕಾರ್ಯಕ್ರಮ ನಡೆಸುತ್ತಿದ್ದಾರೆ ಇದು ನಮ್ಮೆಲ್ಲರ ಸೌಭಾಗ್ಯ ಎಂದರು.
ಸoಪನ್ಮೂಲ ವ್ಯಕ್ತಿ ಗೋವಿಂದರಾಜುರವರು ಪ್ರಸ್ತುತ ರೈತರು ಆಧುನಿಕ ಕೃಷಿ ಪದ್ಧತಿಯಲ್ಲಿ ಯಂತ್ರೋಪಕರಣ ಬಳಕೆ ಅನಿವಾರ್ಯ ಸಣ್ಣ ರೈತರಿಗೆ ಅನುಕೂಲವಾಗಲು ಸಾಕಷ್ಟು ಯಂತ್ರ ಗಳಿವೆ.ಕೃಷಿ ಇಲಾಖೆಯಿಂದ ವಿವಿಧ ಯಂತ್ರೋಪಕರಣಗಳಿಗೆ ಅನುದಾನವಿದ್ದು ಇದನ್ನು ರೈತರು ಸದುಪಯೋಗ ಪಡಿಸಿಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಹಾಲು ಉತ್ಪಾದಕ ಸಹಕಾರಿ ಸಂಘದ ಕಾರ್ಯದರ್ಶಿ ನಾಗರಾಜ್. ಒಕ್ಕೂಟದ ಅಧ್ಯಕ್ಷರಾದ ಸುಲೋಚನಾ,ಕೃಷಿ ಮೇಲ್ವಿಚಾರಕ ರಾಘವೇಂದ್ರ ಎನ್,ತಾಲ್ಲೂಕು ವಿಚಕ್ಷಣಾಧಿಕಾರಿ ಉಮಾ,ಸೇವಾಪ್ರತಿನಿಧಿ ರಾಧಮ್ಮ,ಪ್ರಗತಿಬಂಧು ಹಾಗೂ ಸ್ವಸಹಾಯ ಸಂಘದ ಸದಸ್ಯರು ರೈತರು ಉಪಸ್ಥಿತರಿದ್ದರು.
———--ಕೆ.ಬಿ ಚಂದ್ರಚೂಡ