ತುಮಕೂರು-ನೀವು ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ಸಲ್ಲಿಸಿದ್ದ ಅರ್ಜಿ ಅನೂರ್ಜಿತವಾಗಿದೆಯೇ? ಹಾಗಿದ್ದಲ್ಲಿ ಈ ವರದಿ ನಿಮಗಾಗಿ

ತುಮಕೂರು-ಜಿಲ್ಲೆಯ 94 ಅಂಗನವಾಡಿ ಕಾರ್ಯಕರ್ತೆ ಹಾಗೂ 293 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿಗಳಲ್ಲಿ ಅಪೂರ್ಣಗೊಂಡಿರುವ ಅರ್ಜಿಗಳನ್ನು ಮತ್ತೊಮ್ಮೆ ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿ ಇಲಾಖೆ ಉಪ
ನಿರ್ದೇಶಕ ಚೇತನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆನ್‌ಲೈನ್ ಮುಖಾಂತರ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 3249 ಹಾಗೂ ಸಹಾಯಕಿಯರ ಹುದ್ದೆಗೆ 2003 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 1537 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 963 ಅಂಗನವಾಡಿ ಸಹಾಯಕಿಯರ ಅರ್ಜಿಗಳು ಅಪೂರ್ಣಗೊಂಡಿರುತ್ತವೆ.

ಅಪೂರ್ಣಗೊಂಡ ಅರ್ಜಿಗಳನ್ನು ಡಿಸೆಂಬರ್ 26 ರಿಂದ 2025ರ ಜನವರಿ 5ರೊಳಗೆ ವೆಬ್‌ಸೈಟ್ https://karnemakaone.kar.nic.in/abcd/ನಲ್ಲಿ ಅಭ್ಯರ್ಥಿಗಳು ಮತ್ತೊಮ್ಮೆ ಅಪ್‌ಲೋಡ್ ಮಾಡಬಹುದಾಗಿದೆ.ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ 4 ಹಂತಗಳನ್ನು ಅನುಸರಿಸಬೇಕು. ಮೊದಲ ಹಂತದಲ್ಲಿ ಹುದ್ದೆಯನ್ನು ಆಯ್ಕೆ ಮಾಡಿ ನಿಗಧಿತ ಅರ್ಜಿ ನಮೂನೆ ತುಂಬಿ ಸಲ್ಲಿಸಬೇಕು. ಬಳಿಕ ಅರ್ಜಿಯ ಐಡಿಯನ್ನು ಟಿಪ್ಪಣಿ ಮಾಡಬೇಕು. 2ನೇ ಹಂತದಲ್ಲಿ ಅಭ್ಯರ್ಥಿಗಳ ಭಾವಚಿತ್ರ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಬೇಕು.3ನೇ ಹಂತದಲ್ಲಿ ಡಿಜಿ-ಲಾಕರ್ ಮೂಲಕ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು. ಅಪ್‌ಲೋಡ್ ಮಾಡಿದ ದಾಖಲೆಗಳಿಗೆ ಇ-ಸಹಿ ಮಾಡಬೇಕು.4ನೇ ಹಂತದಲ್ಲಿ ಇ-ಸಹಿ ಹೊಂದಿರುವ ಅರ್ಜಿಯನ್ನು ಡೌನ್‌ಲೋಡ್ ಮಾಡಿ ವೀಕ್ಷಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿ ಅಥವಾ ದೂರವಾಣಿ ಸಂಖ್ಯೆ0816-2956624ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

× How can I help you?