ತುಮಕೂರು:ಶ್ರೀ ಸಿದ್ದಗಂಗಾ ಕಲಾ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಹಾಗೂ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಸಹಯೋಗದೊಂದಿಗೆ 2024-25 ನೇ ಸಾಲಿನ ತುಮಕೂರು ವಿಶ್ವವಿದ್ಯಾನಿಲಯದ ಪುರುಷ ಮತ್ತು ಮಹಿಳೆಯರ ಅಂತರ್ ಕಾಲೇಜು ಗುಡ್ಡಗಾಡು ಓಟದ ಸ್ಪರ್ಧೆಯನ್ನು ಶ್ರಿ ಸಿದ್ದಗಂಗಾ ಮಠದಲ್ಲಿ ಆಯೋಜಿಸಲಾಗಿತ್ತು.
ಪರಮಪೂಜ್ಯ ಶ್ರೀ ಸಿದ್ದಲಿಂಗಸ್ವಾಮೀಜಿಗಳು ಸ್ಪರ್ಧೆಗೆ ಚಾಲನೆ ನೀಡಿದರು.
ಸಿದ್ದಗಂಗಾ ಪದವಿ ಕಾಲೇಜುಗಳ ಸಂಯೋಜಕರಾದ ಡಾ.ಡಿ.ಎನ್.ಯೋಗೀಶ್ವರಪ್ಪನವರು ಪ್ರಾಂಶುಪಾಲರಾದ ಡಾ,ಟಿ.ಬಿ.ನಿಜಲಿoಗಪ್ಪ, ತುಮಕೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ,ಸುದೀಪ್ ಕುಮಾರ್ ಸ್ಪರ್ಧೆಯ ಸಂಚಾಲಕರದ ಉದಯ್ ಕುಮಾರ್.ಎಂ ಮತ್ತು ಐ.ಕ್ಯೂ.ಎ.ಸಿ ಸಂಯೋಜಕರದ ಪ್ರೊ. ಎಚ್.ಜಿ.ಸರ್ವಮಂಗಳ, ಪ್ರೊ.ಸಿ.ಎಸ್.ಸೋಮಶೇಖರಯ್ಯನವರು ಹಾಗೂ ಎಲ್ಲಾ ಕಾಲೇಜುಗಳ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರು, ಸ್ಪರ್ಧಾಳುಗಳು ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.