ತುಮಕೂರು:ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ನಾಳೆ ಪ್ರತಿಭಟನೆ

ತುಮಕೂರು:ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ, ಹಿಂದೂ ದೇವಾಲಯಗಳ ಧ್ವಂಸದoತಹ ಕೃತ್ಯಗಳನ್ನು ಖಂಡಿಸಿ ಇದೇ ನಾಳೆ ನಗರದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ವಿವಿಧ ಮಠಾಧೀಶರು,ಸಂಘಟನೆಗಳ ಮುಖoಡರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು .

ಈ ಹೋರಾಟ ಬೆಂಬಲಿಸಿ ವಿವಿಧ ಮಠಗಳ ಸ್ವಾಮೀಜಿಗಳು, ಸಂಘಸoಸ್ಥೆಗಳ ಮುಖoಡರು ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಹೋರಾಟ ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಹೇಳಿದರು.

ಬೆಟ್ಟದಹಳ್ಳಿ ಗವಿ ಮಠದ ಚಂದ್ರಶೇಖರ ಸ್ವಾಮೀಜಿ ಮಾತನಾಡಿ,ಸಖಲ ಜೀವಿಗಳಿಗೂ ಲೇಸು ಬಯಸುವುದೇ ಎಲ್ಲಾ ಧರ್ಮಗಳ ಆಶಯವಾಗಿದೆ. ಪ್ರಕೃತಿ ನಮಗೆ ಎಲ್ಲವನ್ನೂ ಕೊಟ್ಟಿದೆ. ಇಲ್ಲಿ ಎಲ್ಲರೂ ಸಮಾನವಾಗಿ ಬದುಕಲು ಆಶ್ರಯ ನೀಡಿದೆ. ಆದರೆ ಹಿಂಸೆಯನ್ನು ಪ್ರತಿಪಾದಿಸುತ್ತಾ ದೌರ್ಜನ್ಯ ಮಾಡುವುದನ್ನು ಯಾವ ಧರ್ಮವೂ ಒಪ್ಪುವುದಿಲ್ಲ. ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ಕೃತ್ಯಗಳನ್ನು ಖಂಡಿಸುತ್ತೇವೆ ಎಂದರು.

ತoಗನಹಳ್ಳಿ ಮಠದ ಬಸವ ಮಹಾಲಿಂಗ ಸ್ವಾಮೀಜಿ, ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಯಾವುದೇ ನಾಗರೀಕ ಸಮಾಜ ತಲೆ ತಗ್ಗಿಸುವಂತದ್ದು, ಕೂಡಲೇ ಅಲ್ಲಿ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಅಲ್ಲಿನ ಹಿಂದೂಗಳು ಶಾಂತಿಯಿoದ ಬಾಳುವ ವಾತಾವರಣ ಕಲ್ಪಿಸಬೇಕು. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಕೊಡಬೇಕು ಎಂದು ಹೇಳಿದರು.

ಬುಧವಾರ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಯಲಿದೆ. ಎಲ್ಲಾ ಸಮಾಜದವರು, ಸಂಘಟನೆಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟಕ್ಕೆ ಕೈ ಜೋಡಿಸಬೇಕು ಎಂದು ಸ್ವಾಮೀಜಿ ಕರೆ ನೀಡಿದರು.

ಬೆಳ್ಳಾವಿ ಕಾರದ ಮಠದ ಕಾರದ ವೀರಬಸವ ಸ್ವಾಮೀಜಿ ಮಾತನಾಡಿ,ಡಾ.ಬಿ.ಆರ್.ಅಂಬೇಡ್ಕರ್ ಹೇಳಿದಂತೆ ಸರ್ವರೂ ಸಮಾನವಾಗಿ ಬಾಳಲು ಅವಕಾಶ ಸಿಗಬೇಕು. ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಇದು ಅಮಾನವೀಯ ಇಂತಹ ಕೃತ್ಯಗಳನ್ನು ತಕ್ಷಣ ತಡೆದು ಹಿಂದೂಗಳು ನೆಮ್ಮದಿಯಿಂದ ಬದುಕಲು ಅವಕಾಶ ನೀಡಬೇಕು ಎಂದರು.

ಹಿoದೂ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಬುಧವಾರ ಬೆಳಿಗ್ಗೆ 10.30ಕ್ಕೆ ನಗರದ ಬಿಜಿಎಸ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ನಂತರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ನೀಡಲಾಗುವುದು. ಹಲವು ಮಠಗಳ ಸ್ವಾಮೀಜಿಗಳು ವಿವಿಧ ಸಮಾಜದ ಮುಖಂಡರು, ಸಂಘಸoಸ್ಥೆಗಳು ಈ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿಲಿದ್ದಾರೆ ಎಂದು ಪ್ರದೀಪ್‌ಕುಮಾರ್ ಹೇಳಿದರು.

ರಾಮೇನಹಳ್ಳಿ ಮಠದ ಶಿವಪಂಚಾಕ್ಷರಿ ಸ್ವಾಮೀಜಿ, ಮಾಜಿ ಸಚಿವ ಸೊಗಡು ಶಿವಣ್ಣ, ನಗರ ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾಕುಮಾರ್, ಮುಖಂಡರಾದ ಪಂಚಾಕ್ಷರಯ್ಯ, ನೇತಾಜಿ ಮೋಹನ್‌ ಕುಮಾರ್, ಪಚ್ಚೇಶ್ ಅಣೇಕಾರ್, ಕೆ.ಪಿ.ಮಹೇಶ್, ರಾಮಚಂದ್ರರಾವ್, ಶೀತಕಲ್ ಕೃಷ್ಣಯ್ಯ, ಶಬ್ಬೀರ್ ಅಹ್ಮದ್ ಮೊದಲಾದವರು ಭಾಗವಹಿಸಿದ್ದರು.

———ಕೆ.ಬಿ ಚಂದ್ರಚೂಡ

Leave a Reply

Your email address will not be published. Required fields are marked *

× How can I help you?