
ತುಮಕೂರು:ಜಿಲ್ಲೆಯ ಸೋರೆಕುಂಟೆ ಬಳಿಯ ಪಿ.ಗೊಲ್ಲಹಳ್ಳಿ ಗ್ರಾಮದಲ್ಲಿ 150 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಶಂಕುಸ್ಥಾಪನೆಯನ್ನು ಮುಖ್ಯಮoತ್ರಿ ಸಿದ್ದರಾಮಯ್ಯ ನೆರವೇರಿಸಿದರು.ಈ ಸಂದರ್ಭದಲ್ಲಿ ಸಚಿವರುಗಳಾದ ಡಾ,ಜಿ.ಪರಮೇಶ್ವರ,ಪ್ರಿಯಾಂಕ್ ಖರ್ಗೆ, ಕೆ.ಎನ್.ರಾಜಣ್ಣ, ಶಾಸಕರಾದ ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್, ಮಾಜಿ ಶಾಸಕ ಡಿ.ಸಿ.ಗೌರಿಶಂಕರ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮಹಾನಗರಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ,ಅಪರ ಜಿಲ್ಲಾಧಿಕಾರಿ ಡಾ:ಎನ್.ತಿಪ್ಪೇಸ್ವಾಮಿ ಸೇರಿದಂತೆ ಮತ್ತಿತರರಿದ್ದರು.
———–—ಕೆ.ಬಿ ಚಂದ್ರಚೂಡ