ತುಮಕೂರು:ಡಿ.26ರಿಂದ ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಪೂಜೆ ಜನ ಜಾಗೃತಿ ಧರ್ಮ ಸಮಾರಂಭ-ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ ಸಾರಥ್ಯ

ತುಮಕೂರು:ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ ನಿಂದ ನಗರದಲ್ಲಿ ನಾಲ್ಕು ದಿನಗಳ ಕಾಲ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಧನುರ್ಮಾಸದ ಇಷ್ಟಲಿಂಗ ಮಹಾಪೂಜಾ ಹಾಗೂ ಜನಜಾಗೃತಿ ಧರ್ಮ ಸಮಾರಂಭ ಹಮ್ಮಿಕೊಳ್ಳ ಲಾಗಿದೆ.

ಪoಚಾಚಾರ್ಯ ಸೇವಾ ಟ್ರಸ್ಟ್ ಅಧ್ಯಕ್ಷ ಟಿ.ಆರ್.ಸದಾಶಿವಯ್ಯ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿ, ಈ ತಿಂಗಳ 26ರಿಂದ 29ರ ವರೆಗೆ ನಗರದ ವಿಶಾಲಾಕ್ಷಮ್ಮ ಸದಾಶಿವಯ್ಯ ಸಭಾಭವನದಲ್ಲಿ ರಂಭಾಪುರಿ ಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ಸಿದ್ಧರಬೆಟ್ಟ ಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿದಿನ ಬೆಳಿಗ್ಗೆ 5.30ಕ್ಕೆ ಧನುರ್ಮಾಸದ ಇಷ್ಟಲಿಂಗ ಪೂಜೆ ನೆರವೇರಿಸುವರು.ಅವರ ದಿವ್ಯ ಸಾನಿಧ್ಯದಲ್ಲಿ ಸಂಜೆ 6.30ಕ್ಕೆ ಜನ ಜಾಗೃತಿ ಧರ್ಮ ಸಮಾರಂಭ ನಡೆಯಲಿದೆ ಎಂದು ಹೇಳಿದರು.

26ರಂದು ಸಂಜೆ 6.30ಕ್ಕೆ ಮಾಜಿ ಸಂಸದ ಜಿ.ಎಸ್.ಬಸವರಾಜು ಜನಜಾಗೃತಿ ಧರ್ಮ ಸಮಾರಂಭ ಉದ್ಘಾಟಿಸಿವರು, ಸಂಸದ ಡಾ.ಸಿ.ಎಸ್.ಮoಜುನಾಥ್ ಉಪನ್ಯಾಸ ನೀಡುವರು,ಯಡಿಯೂರು ಮಠದ ರೇಣುಕ ಶಿವಾಚಾರ್ಯ ಸ್ವಾಮೀಜಿ, ಸಿದ್ಧರಬೆಟ್ಟದ ವೀರಭಧ್ರ ಶಿವಾಚಾರ್ಯ ಸ್ವಾಮೀಜಿ, ಬೆಳ್ಳಾವಿ ಕಾರದ ಮಠದ ಕಾರದ ವೀರಬಸವ ಸ್ವಾಮೀಜಿ, ಸಿದ್ಧಗಂಗಾ ವೈದ್ಯಕೀಯ ಕೇಂದ್ರದ ನಿರ್ದೇಶಕ ಡಾ.ಎಸ್.ಪರಮೇಶ್ವರ್, ಡಾ.ಎಂ.ಆರ್.ಹುಲಿನಾಯ್ಕರ್ ಮೊದಲಾದವರು ಭಾಗವಹಿಸುವರು. ನಂತರ ವಿವಿಧ ಗಣ್ಯರು ಗುರು ರಕ್ಷೆ ಸ್ವೀಕರಿಸುವರು ಎಂದರು.

27ರ ಸಮಾರಂಭದಲ್ಲಿ ಬಾಳೆಹೊನ್ನೂರು ಮಠದ ರೇಣುಕಾಚಾರ್ಯ ಸ್ವಾಮೀಜಿ, ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ತಿಪಟೂರು ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ, ಹೊನ್ನಳಿ ಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಮಾದಿಹಳ್ಳಿ ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ದೊಡ್ಡಗುಣಿ ಮಠದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಾಸಕ ಜಿ.ಬಿ.ಜ್ಯೋತಿಗಣೇಶ್ ಮೊದಲಾದವರು ಭಾಗವಹಿಸುವರು.

28ರಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ವಿವಿಧ ಮಠಗಳ ಸ್ವಾಮೀಜಿಗಳು, ವಿವಿಧ ಗಣ್ಯರು ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಟಿ.ಆರ್.ಸದಾಶಿವಯ್ಯ ತಿಳಿಸಿದರು.

29ರಂದು ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ, ಶಂಕರ್ ಮಹದೇವ್ ಬಿದರಿ, ಸಾಹಿತಿ ಪ್ರಶಾಂತ್ ರಿಪ್ಪನ್‌ಪೇಟೆ ಮೊದಲಾದವರು ಭಾಗವಹಿಸುವರು ಎಂದರು.

ಟ್ರಸ್ಟ್ ನ ಕಾರ್ಯದರ್ಶಿ ಭಸ್ಮಾಂಗಿರುದ್ರಯ್ಯ, ಸಹ ಕಾರ್ಯದರ್ಶಿ ಜಿ.ಎಸ್.ಸಿದ್ಧರಾಜು, ಮುಖಂಡರಾದ ಜಿ.ಸಿ.ವಿರೂಪಾಕ್ಷ, ಪ್ರಭು ಆರ್.ಎಸ್, ವೈ.ಕೆ.ಜ್ಯೋತಿ, ವಿಜಯಕುಮಾರ್, ಓಂಕಾರಸ್ವಾಮಿ, ಟಿ.ಎಸ್.ಹರೀಶ್, ನಟರಾಜು, ರೇಣುಕುಮಾರ್ ಹಾಜರಿದ್ದರು.

———–-ಕೆ.ಬಿ ಚಂದ್ರಚೂಡ

Leave a Reply

Your email address will not be published. Required fields are marked *

× How can I help you?