ತುಮಕೂರು-ಐತಿಹಾಸಿಕ ಆದಿಶಕ್ತಿ ಮಾರಮ್ಮ‘ದೇವಾಲಯವನ್ನು ಸಂಪೂರ್ಣವಾಗಿ ಜೀರ್ಣೋದ್ಧಾರ ಮಾಡಲಾಗುತ್ತಿದ್ದು ಕೆಲಸ ತೀವ್ರ ಗತಿಯಲ್ಲಿ ನಡೆದಿದೆ.ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದ ಮಾದರಿಯಲ್ಲಿ ಇದನ್ನು ಸುಮಾರು 2 ಕೋಟಿ ರೂಪಾಯಿಗಳಲ್ಲಿ ಅಭಿವೃದ್ಧಿಗೊಳಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಬಿ.ಸುರೇಶ ಗೌಡ ತಿಳಿಸಿದರು.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೆತ್ತೇನಹಳ್ಳಿ ಇತಿಹಾಸ ಪ್ರಸಿದ್ದ ಶ್ರೀ ಆದಿಶಕ್ತಿ ಮಾರಮ್ಮ ದೇವಿಯ ನೂತನ ದೇವಸ್ಥಾನಕ್ಕೆ ಐದು ದ್ವಾರಬಾಗಿಲು ಇಡುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ದೇವಸ್ಥಾನಕ್ಕೆ ಐದು ದ್ವಾರಗಳು ಇರಲಿದ್ದು ಅವುಗಳನ್ನು ಅಳವಡಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗಿದೆ.ಡಿಸೆಂಬರ್ ಅಥವಾ ಜನವರಿ ತಿಂಗಳಲ್ಲಿ ದೇವಸ್ಥಾನ ಕಾಮಗಾರಿಯನ್ನು ಪೂರ್ಣಗೊಳಿಸಿ ಅದ್ದೂರಿ ಸಮಾರಂಭದಲ್ಲಿ ಉದ್ಘಾಟನೆ ನೆರವೇರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಈ ಸಮಯದಲ್ಲಿ ಉಪಸ್ಥಿತರಿದ್ದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ತಹಶೀಲ್ದಾರ್ ರಾಜೇಶ್ವರಿ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಶಂಕರ್, ಶಿವಕುಮಾರ್, ಬಿದರಕಟ್ಟೆ ಸಿದ್ದೇಗೌಡರು, ಗಿರೀಶ್, ತಾಲೂಕು ಪಂಚಾಯಿತಿ ಅಧ್ಯಕ್ಷ ನರಸಿಂಹಮೂರ್ತಿ ಹಾಗೂ ವೆಂಕಟೇಶ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲಕ್ಷ್ಮೀದೇವಮ್ಮ ಎ.ಪಿ.ಎಂ.ಸಿ ಮಾಜಿ ಸದಸ್ಯರಾದ ಚಂದ್ರಣ್ಣ, ಅರ್ಚಕರು,ಗ್ರಾಮ ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.