ತುಮಕೂರು:ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮಾನವ ಹಕ್ಕುಗಳ ಅರಿವು ಮೂಡಿಸಬೇಕು-ಅಡಿಷನಲ್ ಎಸ್.ಪಿ .ಮರಿಯಪ್ಪ

ತುಮಕೂರು:ಸಮಾಜದ ಪ್ರತಿಯೊಬ್ಬರೂ ತಾರತಮ್ಯವಿಲ್ಲದೆ,ಸಮಾನವಾಗಿ ಬಾಳುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ.ಹಕ್ಕುಗಳ ಅರಿವಿಲ್ಲದವರಿಂದ ಕಾನೂನಿನ ಉಲ್ಲಂಘನೆ ಆಗಬಹುದು ಅಥವಾ ಹಕ್ಕುಗಳ ಬಗ್ಗೆ ತಿಳಿದಿಲ್ಲದವರ ಮೇಲೆ ದೌರ್ಜನ್ಯ ನಡೆಯಬಹುದು.ಈ ಕಾರಣದಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮಾನವ ಹಕ್ಕುಗಳ ಅರಿವು ಮೂಡಿಸಬೇಕು ಎಂದು ಅಡಿಷನಲ್ ಎಸ್ಪಿ ವಿ.ಮರಿಯಪ್ಪ ಹೇಳಿದರು.

ಮಾನವ ಹಕ್ಕುಗಳ ಜಾಗೃತಿ ದಳ ಹಾಗೂ ವಿದ್ಯೋದಯ ಕಾನೂನು ಕಾಲೇಜಿನ ಆಶ್ರಯದಲ್ಲಿ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯಾರೂ ಯಾರ ಹಕ್ಕನ್ನು ಕಸಿಯುವಂತಿಲ್ಲ, ಎಲ್ಲರಿಗೂ ಸಮಾನ ಹಕ್ಕಿದೆ. ಇದಕ್ಕೆ ಸಂಬoಧಿಸಿದoತೆ ನಿಬಂಧನೆಗಳನ್ನು ರೂಪಿಸಲಾಗಿದೆ. ಹಕ್ಕುಗಳ ಅರಿವು ಬೆಳೆಸಿಕೊಂಡರೆ ಸಮಾಜದಲ್ಲಿ ಎಲ್ಲರೂ ಶಾಂತಿ ಸೌಹಾರ್ದತೆಯಿoದ ಬಾಳಲು ಸಾಧ್ಯವಾಗುತ್ತದೆ ಎಂದರು.

ಮಾನವ ಹಕ್ಕುಗಳ ಅರಿವಿಲ್ಲದವರು, ಕಾನೂನಿನ ತಿಳವಳಿಕೆಯಿಲ್ಲದವರು, ಅಮಾಯಕರು ಶೋಷಣೆಗೆ ಒಳಗಾಗುತ್ತಲೇ ಇದ್ದಾರೆ. ಅಂತಹವರಲ್ಲಿ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಅವರ ಹಕ್ಕುಗಳು ದಮನವಾಗದಂತೆ ನೆರವಾಗಬೇಕು. ಇಂತಹ ಕಾರ್ಯಕ್ರಮಗಳು ಹೆಚ್ಚು ನಡೆದು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತನ್ನ ಮೂಲಭೂತ ಹಕ್ಕುಗಳ ಬಗ್ಗೆ ತಿಳುವಳಿಕೆ ಮೂಡಿಸಬೇಕು ಎಂದರು.

ಮಾನವ ಹಕ್ಕುಗಳ ಜಾಗೃತಿ ದಳದ ಜಿಲ್ಲಾಧ್ಯಕ್ಷ ಹೆಚ್.ಎಂ.ರವೀಶಯ್ಯ ಮಾತನಾಡಿ, ಎಲ್ಲರೂ ಸಮಾನರಾಗಿ,ಸ್ವಾಭಿಮಾನದಿಂದ ಬಾಳಲು ಮಾನವ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರೂ ತಿಳಿಯಬೇಕು, ಹಕ್ಕುಗಳ ಉಲ್ಲಂಘನೆಯಾದಾಗ, ಯಾರಾದರೂ ತಮ್ಮ ಹಕ್ಕುಗಳ ದಮನ ಮಾಡಿದಾಗ ಆಯೋಗಕ್ಕೆ ದೂರು ನೀಡಿ ತಮ್ಮ ಹಕ್ಕು ಚಲಾಯಿಸಬಹುದು ಎಂದರು.

ಪ್ರತಿ ವ್ಯಕ್ತಿಯೂ ತನ್ನ ಹಕ್ಕುಗಳ ಬಗ್ಗೆ ತಿಳಿಯಬೇಕು ಎಂದು ಮಾನವ ಹಕ್ಕುಗಳ ಆಯೋಗ ವಿವಿಧ ಕಾರ್ಯಕ್ರಮಗಳ ಮೂಲಕ ಜನಜಾಗೃತಿ ಮೂಡಿಸುತ್ತಿದೆ.ವಿಶೇಷವಾಗಿ ಮಕ್ಕಳು, ಯುವ ಜನರು ಮಾನವ ಹಕ್ಕುಗಳು ಹಾಗೂ ಈ ನೆಲದ ಕಾನೂನಿನ ಅರಿವು ಬೆಳೆಸಿಕೊಂಡರೆ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳು ಸಾಧ್ಯ ಎಂದು ಹೇಳಿದರು.

ಹೆಚ್.ಎಸ್.ರಾಜು, ತರಕಾರಿಮಹೇಶ್,ಲೋಕೇಶ್ವರ್, ಶಮಾಸೈಯದಿ,ಡಾ.ಜಿ.ವೆಂಕಟೇಶ್, ಬಿಳಗಿರೆ ಶಿವಕುಮಾರ್, ಶ್ರೀನಿವಾಸ ಪ್ರಸಾದ್,ಪ್ರೊ.ಕೆ.ಚಂದ್ರಣ್ಣ ಮೊದಲಾದವರು ಭಾಗವಹಿಸಿದ್ದರು.

——————ಕೆ.ಬಿ ಚಂದ್ರಚೂಡ

Leave a Reply

Your email address will not be published. Required fields are marked *

× How can I help you?