
ತುಮಕೂರು:ಕ್ರೀಡೆ,ನಾಟಕ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ತುಮಕೂರು ತಾಲೂಕಿನ ಮೇಳೆಹಳ್ಳಿ ಗ್ರಾಮದ ಮಕ್ಕಳು ನಿರಂತರವಾಗಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಊರಿನ ಹೆಸರನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ಸಂತಸ ವ್ಯಕ್ತಪಡಿಸಿದರು.
ನಗರಕ್ಕೆ ಸಮೀಪದ ಮೇಳೆಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ರಾಜ್ಯಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಭಾಗವಹಿಸಲು ತೆರಳುತ್ತಿರುವ ಹಿನ್ನೆಲೆಯಲ್ಲಿ ಹಿಮಾಲಯ ಕಂಪೆನಿ ಜೊತೆಗೂಡಿ ಮಕ್ಕಳನ್ನು ಬೀಳ್ಕೂಡುವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ.ಆದರೆ ಅವರಿಗೆ ಸರಿಯಾದ ಮಾರ್ಗದರ್ಶನ ಮತ್ತು ಹಣಕಾಸಿನ ನೆರವು ನೀಡಿದರೆ, ಅವರು ಸಹ ಒಲಂಪಿಕ್‌ನoತಹ ಕ್ರೀಡೆಗಳಲ್ಲಿ ಭಾಗವಹಿಸಿ ದೇಶಕ್ಕೆ ಹೆಸರು ತರುವ ಕೆಲಸ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮೀಣ ಕ್ರೀಡಾಪಟುಗಳಿಗೆ ಅಗತ್ಯ ನೆರವು ನೀಡಲು ಹಿಮಾಲಯ ಕಂಪನಿ ಮುಂದೆ ಬಂದಿರುವುದು ಸ್ವಾಗತಾರ್ಹ ಬೆಳೆವಣಿಗೆ ಎಂದರು.
ಇದೇ ರೀತಿ ತುಮಕೂರು ಪರಿಸರದಲ್ಲಿ ಕಾರ್ಯಚಟುವಟಿಕೆ ನಡೆಸುತ್ತಿರುವ ಕೈಗಾರಿಕೆಗಳು ಗ್ರಾಮೀಣ ಪ್ರತಿಭೆಗಳ ಪ್ರೋತ್ಸಾಹಕ್ಕೆ ತಮ್ಮ ಸಿ.ಎಸ್.ಆರ್ ನಿಧಿಯನ್ನು ಬಳಕೆ ಮಾಡಿದರೆ ಜಿಲ್ಲೆಯ ಹೆಸರಿನ ಜೊತೆಗೆ, ಕಂಪನಿಯ ಹೆಸರು ಸಹ ಲೋಕ ವಿಖ್ಯಾತವಾಗಲಿದೆ,ಈ ನಿಟ್ಟಿನಲ್ಲಿ ಹಾಲಪ್ಪ ಪ್ರತಿಷ್ಠಾನ ಎಲ್ಲಾ ನೆರವನ್ನು ನೀಡಲಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಹಿಮಾಲಯ ಸಂಸ್ಥೆಯ ಜನರಲ್ ಮ್ಯಾನೇಜರ್ ಸಂಜೀವ್ ಖನ್ನಾ,ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಪರಮೇಶ್ವರಪ್ಪ,ಬಿಇಓ ಹನುಮಂತಪ್ಪ,ಗ್ರಾಮದ ಮುಖಂಡರಾದ ಯದು, ಮಲ್ಲಿಕಾರ್ಜುನಯ್ಯ,ಗಂಗರಾಜಯ್ಯ,ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಸಿದ್ದಗಂಗಯ್ಯ,ರಾಷ್ಟ್ರೀಯ ಕಬ್ಬಡಿ ತರಬೇತಿದಾರರಾದ ವಜ್ರಪ್ಪ,ನಿವೃತ್ತ ದೈಹಿಕ ಶಿಕ್ಷಕರು, ಮೆಳೆಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರುಗಳು,ಶಿಕ್ಷಕರು ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಸದಸ್ಯರುಗಳು
ಇದ್ದರು.