ತುಮಕೂರು-ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ ಜಿಲ್ಲಾ ಘಟಕದ ವತಿಯಿಂದ ನಗರದ ಹೊರಪೇಟೆ ಮುಖ್ಯರಸ್ತೆಯಲ್ಲಿರುವ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ನಡೆಯಲಿರುವ ರಾಷ್ಟ್ರೀಯ ಪತ್ರಿಕಾ ದಿನಾಚರಣೆ, ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಹಾಗೂ ರಾಜ್ಯ ಕಾರ್ಯಕಾರಿಣಿ ಸಭೆಯ ಸಿದ್ಧತೆಯನ್ನು ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ,ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಎಸ್. ಕೃಷ್ಣಮೂರ್ತಿ, ಜಿಲ್ಲಾಧ್ಯಕ್ಷ ಜಿ.ಕರುಣಾಕರ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಪರಿಶೀಲಿಸಿದರು.
ಪರಿಶೀಲನೆ ವೇಳೆಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಭೀಮರಾಯ್ ಹದ್ದಿನಾಳ್, ರಾಜ್ಯ ಜಂಟಿ ಕಾರ್ಯದರ್ಶಿ ಅಮಾನ್ ಕೊಡಗಲಿ, ರಾಜ್ಯ ಖಜಾಂಚಿ ಎಸ್.ಟಿ. ವೇದಮೂರ್ತಿ, ಸಿ.ರಂಗನಾಥ್, ಬಿಜಾಪುರ ಜಿಲ್ಲಾಧ್ಯಕ್ಷ ಇರ್ಫಾನ್ ಶೇಖ್, ತುಮಕೂರು ಜಿಲ್ಲಾ ಉಪಾಧ್ಯಕ್ಷ ಪಿ.ಎಸ್.ಮಲ್ಲಿಕಾರ್ಜುನ ಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎನ್.ಮಂಜುನಾಥಗೌಡ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿ.ಎನ್.ಮಹೇಶ್‌ಕುಮಾರ್, ಖಜಾಂಚಿ ಕಂಬಣ್ಣ, ಕಾರ್ಯಕಾರಿ ಸಮಿತಿ ಸದಸ್ಯರಾದ ತೊ.ಗ.ಅಡವೀಶಪ್ಪ, ಬಸವರಾಜು, ಹಿರಿಯರಾದ ಆರ್.ನಾಗರಾಜು, ಸಂಪಾದಕರುಗಳಾದ ಸಿದ್ಧರಾಜು, ಅಭಿಷೇಕ್, ಅಕ್ಷಯ್ ಚೌದ್ರಿ ಸೇರಿದಂತೆ ಹಲವರು ಇದ್ದರು.