ತುಮಕೂರು:ಗ್ರಾಮಾಂತರ ಯೋಜನಾ ಕಚೇರಿ ವ್ಯಾಪ್ತಿಯ ಬೆಳ್ಳಾವಿ ವಲಯದ ಚನ್ನೇನಹಳ್ಳಿ ಗ್ರಾಮದಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಸಿರಿಧಾನ್ಯ ಬೇಸಾಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಸದಸ್ಯರಾದ ನಿಜಗುಣ ರವರು ಉದ್ಘಾಟಿಸಿ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಡಾ||ಡಿ.ವೀರೇಂದ್ರ ಹೆಗ್ಗಡೆಯವರು ಒಳ್ಳೆಯ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ.ನಾವೆಲ್ಲರೂ ಆಹಾರ ಬೆಳೆಗಳಾದ ಸಿರಿಧಾನ್ಯ ಬೆಳೆಯಲು ಮುಂದಾಗಬೇಕು ಎಂದರು.
ಸoಪನ್ಮೂಲ ವ್ಯಕ್ತಿ ರಘುಕೊರಲೆ ರವರು ಇತ್ತೀಚೆಗೆ ಮಾರುಕಟ್ಟೆಯಲ್ಲಿ ಸಿರಿಧಾನ್ಯಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ರೈತರು ಅತ್ಯಂತ ಕಡಿಮೆ ನೀರಿನಲ್ಲಿ ಸಿರಿಧಾನ್ಯ ಬೆಳೆ ಬೆಳೆಯಬಹುದಾಗಿದೆ ಅಲ್ಲದೆ ಆರ್ಥಿಕ ಸುಧಾರಣೆಗೂ ಕೃಷಿ ಚಟುವಟಿಕೆಗೆ ಹೆಚ್ಚಿನ ಸಹಕಾರಿ ಯಾಗಲಿದೆ.ಸಿರಿಧಾನ್ಯ ವ್ಯವಸಾಯದಲ್ಲಿ ಸಮಯಕ್ಕೆ ಸರಿಯಾಗಿ ಬಿತ್ತನೆ,ಕಳೆ ನಿರ್ವಹಣೆ,ಬೆಳೆ ಕಟಾವನ್ನು ಮಾಡುವುದು ಅವಶ್ಯಕವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಶ್ರೀಮತಿ ಭಾರತಿ ಕೃಷಿ ಮೇಲ್ವಿಚಾರಕ ರಾಘವೇಂದ್ರ.ಎನ್. ಸೇವಾಪ್ರತಿನಿಧಿ ಶ್ರೀಮತಿ ಯಶಸ್ವಿನಿ,ಪ್ರಗತಿಬಂಧು ಹಾಗೂ ಸ್ವಸಹಾಯ ಸಂಘದ ಸದಸ್ಯರು ರೈತರು ಉಪಸ್ಥಿತರಿದ್ದರು.
———-–ಚಂದ್ರಚೂಡ ಕೆ.ಬಿ