ತುಮಕೂರು-ಬಿ.ವಿ.ಎ. ತರಗತಿ ಪ್ರವೇಶಾತಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನ

ತುಮಕೂರು:  ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್(ಬಿ.ವಿ.ಎ.) ದೃಶ್ಯಕಲೆ ತರಗತಿ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬಿ.ವಿ.ಎ. ಪದವಿಯು ಎನ್.ಇ.ಪಿ. ಪದ್ಧತಿಯಲ್ಲಿ 4 ವರ್ಷದ ಎಂಟು ಸೆಮಿಸ್ಟರ್‌ಗಳನ್ನು ಒಳಗೊಂಡಿದ್ದು, 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ(ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ, ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ಅಂತರ್ಜಾಲ ವಿಳಾಸ https://uucms.karnataka.gov.in ಅಥವಾ https://www.cavamysore.karnataka.gov.in ಮೂಲಕವೇ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 0821-2438931ನ್ನು ಸಂಪರ್ಕಿಸಬೇಕೆಂದು ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

× How can I help you?