ತುಮಕೂರು ಮೇ.13: ಅಲ್ಪಾವಧಿಯಲ್ಲಿ ವೃತ್ತಿಜೀವನ ನಡೆಸಲು ಡಿಪ್ಲೋಮಾ ಕೋರ್ಸ್ಗಳು ಉಪಯುಕ್ತವಾಗಿವೆ ಎಂದು ಹಿರೇಹಳ್ಳಿ ಕೈಗಾರಿಕಾ ಪ್ರದೇಶ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ದ ಪ್ರಾಚಾರ್ಯ ಜಯಪ್ರಕಾಶ್ ಜೆ.ಕೆ. ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಜಿಟಿಟಿಸಿ ಸಂಸ್ಥೆಯಲ್ಲಿರುವ ಕೋರ್ಸುಗಳ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಜಿಟಿಟಿಸಿ ಸಂಸ್ಥೆಯು ಜಿಲ್ಲೆಯಲ್ಲೇ ಹೆಸರಾಂತ ತಾಂತ್ರಿಕ ಶಿಕ್ಷಣ ಸಂಸ್ಥೆಯಾಗಿದ್ದು, ಸಂಸ್ಥೆಯಲ್ಲಿ ಪ್ರಾಯೋಗಿಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ವಿಶೇಷವಾಗಿ ವಿದ್ಯಾರ್ಥಿನಿಯರಿಗೆ ಶೇ. 33ರಷ್ಟು ಸೀಟುಗಳು ಮೀಸಲಿಡಲಾಗಿದೆ. ಅರ್ಹ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ವಿದ್ಯಾಸಿರಿ ವಿದ್ಯಾರ್ಥಿ ವೇತನ ಸೌಲಭ್ಯವಿರುತ್ತದೆ ಎಂದು ತಿಳಿಸಿದರು.

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2025-26ನೇ ಶೈಕ್ಷಣಿಕ ವರ್ಷದಲ್ಲಿ ವಿಶಿಷ್ಠ ಉದಯೋನ್ಮುಖ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಬಹು ರಾಷ್ಟ್ರೀಯ ಕೈಗಾರಿಕೆಗಳಿಗೆ ಬಹು ಬೇಡಿಕೆಂದು ಕೋರ್ಸ್ ಗಳು ಇದಾಗಿದೆ. ಅಲ್ಪಾವಧಿಯಲ್ಲಿ ಉದ್ಯೋಗ ಬಯಸುವ ವಿದ್ಯಾರ್ಥಿಗಳು ಈ ಕೋರ್ಸುಗಳ ಕಲಿಕೆಯ ಕಡೆಗೆ ಗಮನ ಹರಿಸಬೇಕು. ಜಿಟಿಟಿಸಿ ಸಂಸ್ಥೆಯಲ್ಲಿ ಕಲಿತ ಎಲ್ಲಾ ವಿದ್ಯಾರ್ಥಿಗಳಿಗೂ ಶೇ.100ರಷ್ಟು ಉದ್ಯೋಗ ದೊರಕಿಸಿಕೊಡುವಲ್ಲಿ ತುಮಕೂರು ನಗರದಲ್ಲಿ ಮುಖ್ಯಪಾತ್ರ ವಹಿಸಿದೆ ಎಂದು ಅವರು ತಿಳಿಸಿದರು.

ಸಂಸ್ಥೆಯಲ್ಲಿ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ (DTDM), ಮೆಕಟ್ರಾನಿಕ್ಸ್ (DMCH) ಮತ್ತು ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (DEEE) ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಎಸ್.ಎಸ್.ಎಲ್.ಸಿ/ಐ.ಟಿ.ಐ/ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.

ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಮೇ 20 ಕಡೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗಾಗಿ: ಜಿ.ಟಿ.ಟಿ.ಸಿ ಕಾಲೇಜು, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು-572168 ಅಥವಾ ಮೊ.ಸಂ. 9980344441, 8310729855, 9731351039, 9964154055 ನ್ನು ಸಂಪರ್ಕಿಸಬೇಕೆಂದು ಅವರು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಕೇಂದ್ರದ ಉಪನ್ಯಾಸಕರಾದ ಮಹೇಶ್ ಬಿ.ಆರ್., ಗಿರಿಧರ್ ಇ.ವಿ., ಹೇಮಂತ್ ಅವರು ಉಪಸ್ಥಿತರಿದ್ದರು.