ತುಮಕೂರು-ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಡಿಸಿದ 16ನೇ ಬಜೆಟ್‌ನಲ್ಲಿ ಎತ್ತಿನಹೊಳೆ ಯೋಜನೆಯಿಂದ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ 45 ಕೆರೆ ಹಾಗೂ ಕೊರಟಗೆರೆ ತಾಲ್ಲೂಕಿನ 62ಕೆರೆಗಳನ್ನು ತುಂಬಿಸಿ ಅಂತರ್ಜಲ ಹೆಚ್ಚಿಸುವ ಯೋಜನೆಗೆ 553 ಕೋಟಿ ರೂ. ಅನುದಾನ, ಮಧುಗಿರಿಯಲ್ಲಿ ನಬಾರ್ಡ್ ಸಹಯೋಗದೊಂದಿಗೆ ನೂತನ ಜಿಟಿಟಿಸಿ ಸ್ಥಾಪನೆ, ಉದ್ಯೋಗಸ್ಥ ಮಹಿಳೆಯರಿಗೆ ಸುರಕ್ಷಿತ ಹಾಗೂ ಉತ್ತಮ ವಾತಾವರಣ ಕಲ್ಪಿಸಲು ತುಮಕೂರು ಜಿಲ್ಲೆಯ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ 2೦ ಕೋಟಿ ರೂ.ವೆಚ್ಚದಲ್ಲಿ ಮಹಿಳಾ ವಸತಿ ನಿಲಯ, ಚೆನೈ -ಬೆಂಗಳೂರು ಇಂಡಸ್ಟ್ರಿಯಲ್ ಕಾರಿಡಾರ್ ಯೋಜನೆಯಡಿ ಅಭಿವೃದ್ಧಿಪಡಿಸುತ್ತಿರುವ ತುಮಕೂರು ಕೈಗಾರಿಕಾ ನೋಡ್ ನಲ್ಲಿ ಜಪಾನೀಸ್ ಇಂಡಸ್ಟ್ರಿಯಲ್ ಪಾರ್ಕ್ ಸ್ಥಾಪನೆ ಘೋಷಣೆ ಮಾಡಿರುವ ಈ ಬಜೆಟ್ ತುಮಕೂರು ಜಿಲ್ಲೆಗೆ ಬಂಪರ್ ಕೊಡುಗೆಯಾಗಿದೆ
-ನಟರಾಜ್,ಕಾಂಗ್ರೆಸ್ ಮುಖಂಡ