ತುಮಕೂರು-ರಾಜ್ಯ-ಸರ್ಕಾರದ-ವಿರುದ್ಧ-ತುಮಕೂರು-ಜಿಲ್ಲಾ-ಜೆಡಿಎಸ್-ಪ್ರತಿಭಟನೆ


ತುಮಕೂರು: ರಾಜ್ಯದಕಾಂಗ್ರೆಸ್ ಸರ್ಕಾರದ ಜನ ವಿರೋಧಿ ಆಡಳಿತ ಖಂಡಿಸಿ ಜಿಲ್ಲಾ ಜೆಡಿಎಸ್ ಗುರುವಾರ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು.

ಜಿಲ್ಲಾ ಜೆಡಿಎಸ್ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯತ್ರೆಯಲ್ಲಿ ಆಗಮಿಸಿದ ಮುಖಂಡರು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.


ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜನಪ್ಪ, ಯಾವುದೇ ಅಭಿವೃದ್ಧಿ ಕೆಲಸ ಮಾಡದ ಕಾಂಗ್ರೆಸ್ ಸರ್ಕಾರ, ದಿನಬಳಕೆ ಪದಾರ್ಥಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರಿಗೆ ಹೊರೆ ಹೇರಿದೆ. ಚುನಾವಣೆ ವೇಳೆ ಘೋಷಿಸಿದ ಐದು ಗ್ಯಾರಂಟಿ ಯೋಜನೆಗಳು ಚುನಾವಣೆ ಗೆಲ್ಲುವ ಅಸ್ತ್ರ ಮಾಡಿಕೊಂಡಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಎಸ್.ಸಿ, ಎಸ್.ಟಿ. ಸಮುದಾಯದ ಅಭಿವೃದ್ಧಿಗೆ ಬಳಸಬೇಕಾದ ಹಣ ಬಳಸಿಕೊಂಡು ಆ ಸಮುದಾಯಗಳಿಗೆ ಅನ್ಯಾಯ ಮಾಡಿದೆ.ಪ್ರತಿ ತಿಂಗಳು ನೀಡಬೇಕಾದ ಗ್ಯಾರಂಟಿ ಯೋಜನೆ ಹಣವನ್ನು ಚುನಾವಣೆ ಸಂದರ್ಭದಲ್ಲಿ ಕೊಟ್ಟು ಕಾಂಗ್ರೆಸ್ ನಾಯಕರು ಅಧಿಕಾರ ಹಿಡಿಯುವ ಹುನ್ನಾರ ಮಾಡಿಕೊಂಡು ಬರುತ್ತಿದ್ದಾರೆ. ಶಕ್ತಿ ಯೋಜನೆಯಲ್ಲಿ ಹೆಣ್ಣು ಮಕ್ಕಳಿಗೆ ಬಸ್ ಪ್ರಯಾಣ ಉಚಿತ ಎಂದು ಘೋಷಿಸಿ, ಮತ್ತೊಂದೆಡೆ ಬಸ್ ಪ್ರಯಾಣದರ ಹೆಚ್ಚು ಮಾಡಿ ಗಂಡಸರನ್ನು ಸುಲಿಗೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.


ಕಾಂಗ್ರೆಸ್ ಪಕ್ಷಅಧಿಕಾರಕ್ಕೆ ಬಂದಾಗಿನಿAದ ಅಭಿವೃದ್ಧಿ ಕೆಲಸ, ಜನಪರ ಕಾರ್ಯಗಳನ್ನು ಮರೆತು ಅಧಿಕಾರ, ಭ್ರಷ್ಟಾಚಾರಕ್ಕೆ ಒತ್ತು ಕೊಟ್ಟಿದೆ.ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳಾಗಿದೆ. ಪೊಲೀಸರ ಮೇಲೆಯೇ ದಾಳಿ ಮಾಡುವ ಪ್ರಕರಣಗಳೂ ನಡೆಯುತ್ತಿವೆ. ಜನಸಾಮಾನ್ಯರಿಗೆ ರಕ್ಷಣೆ ಇಲ್ಲದಂತಾಗಿದೆ.ಇAತಹ ಕೆಟ್ಟ ಸರ್ಕಾರ ತೊಲಗಬೇಕು.ರಾಜ್ಯಪಾಲರು ಸರ್ಕಾರಕ್ಕೆ ಚಾಟಿ ಬೀಸಿ ಸರಿಯಾದ ದಿಕ್ಕಿನಲ್ಲಿ ನಡೆಯಲು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.


ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು ಮಾತನಾಡಿ, ಪದಾರ್ಥಗಳ ಬೆಲೆ ಏರಿಕೆ, ಬಸ್ ಪ್ರಯಾಣದರ, ವಿದ್ಯುತ್‌ದರಏರಿಕೆ ಮಾಡಿರುವಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನರು ಉತ್ತಮ ಆಡಳಿತವನ್ನು ನಿರೀಕ್ಷೆ ಮಾಡುವಂತಿಲ್ಲ, ಎಲ್ಲಾ ರಂಗಗಳಲ್ಲೂ ವಿಫಲವಾಗಿರುವ ಸರ್ಕಾರವನ್ನು ವಜಾ ಮಾಡಿ ರಾಷ್ಟçಪತಿಗಳ ಆಡಳಿತ ಜಾರಿ ಮಾಡಬೇಕುಎಂದು ಮನವಿ ಮಾಡಿದರು.

ಟಿ.ಎಲ್.ಕುಂಭಯ್ಯ ವಿವಿಧ ತಾಲ್ಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

× How can I help you?