ತುಮಕೂರು-ಹಿಂದೂ-ಮುಸಲ್ಮಾನರು-ಸಹೋದರರಂತೆ-ಸಾಗೋಣ-ಗೃಹ-ಸಚಿವ-ಡಾ.ಜಿ.ಪರಮೇಶ್ವರ

ತುಮಕೂರು– ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಜಮಾಯಿಸಿದ ಸಾವಿರಾರು ಮುಸ್ಲಿಂ ಬಾಂಧವರು ಈ ಬಾರಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಬೆಳಿಗ್ಗೆ 10 ಕ್ಕೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಹಬ್ಬದ ಶುಭಾಶಯವನ್ನು ವಿನಿಮಯ ಮಾಡಿಕೊಂಡರು.

ರಂಜಾನ್ ಹಬ್ಬದ ಸಂಭ್ರಮ ಹಿಂದೂ ಮತ್ತು ಮುಸ್ಲಿಂ ಬಾಂಧವರ ಭಾವೈಕ್ಯತೆಯ ಸಂಕೇತವಾಗಿ ಮಾರ್ಪಟ್ಟಿದ್ದು, ಮುಸ್ಲಿಂ ಬಾಂಧವರಿಗೆ ಹಿಂದೂ ಸಮುದಾಯದವರು ಸಹ ಹಬ್ಬದ ಶುಭಾಶಯ ಕೋರುವ ಮೂಲಕ ಭಾವೈಕ್ಯತೆಯನ್ನು ಸಾರಿದರು.

ಈದ್ಗಾ ಮೈದಾನಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ, ಮಾಜಿ ಶಾಸಕರಾದ ಎಸ್. ಷಫಿಅಹಮದ್, ಡಾ. ಎಸ್.ರಫೀಕ್ ಅಹಮದ್, ಇಕ್ಬಾಲ್ ಅಹಮದ್, ಅಸ್ಲಾಂಪಾಷ, ಮತ್ತಿತರರು ಭೇಟಿ ನೀಡಿ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯ ಕೋರಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ಒಂದು ತಿಂಗಳು ರೋಜಾ ಆಚರಣೆ ಮಾಡಿ ಅತ್ಯಂತ ಪವಿತ್ರವಾಗಿ ಆಚರಿಸುವ ಹಬ್ಬ ರಂಜಾನ್. ಎಲ್ಲಾ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಶುಭಾಶಯ ಕೋರುತ್ತೇನೆ ಎಂದರು.
ನಾಡಿನ ಎಲ್ಲ ಮುಸ್ಲಿಂ ಬಾಂಧವರಿಗೆ ಪವಿತ್ರವಾದ ರಂಜಾನ್ ಹಬ್ಬದ ಶುಭಾಶಯ ಕೋರಿದ ಅವರು ಅವರ ಜೀವನದಲ್ಲಿ ಎಲ್ಲ ಕಷ್ಟಗಳು ದೂರವಾಗಲಿ ೬ನೇ ಶತಮಾನದಲ್ಲಿ ಮಹಮದ್ ಪೈಂಗಬರರು ಇಡೀ ವಿಶ್ವಕ್ಕೆ ಎಲ್ಲರೂ ಸಹೋದರತ್ವದಿಂದ ಬಾಳಬೇಕು ಎಂಬ ಶಾಂತಿಯ ಸಂದೇಶವನ್ನು ಸಾರಿದರು. ಈ ಸಂದೇಶವನ್ನು ಎಲ್ಲ ಮುಸಲ್ಮಾನ್ ಬಾಂಧವರು ಪಾಲಿಸುತ್ತಾರೆ ಎಂಬುದು ನನ್ನ ನಂಬಿಕೆ ಎಂದರು.ಹಿAದೂ ಮತ್ತು ಮುಸ್ಲಿಂ ನಾವೆಲ್ಲರೂ ಸಹೋದರತ್ವ ಭಾವನೆಯಿಂದ ಒಟ್ಟಾಗಿ ಬಾಳೋಣ ಎಂದು ಕರೆ ನೀಡಿದರು.


ನಿನ್ನೆ ಯುಗಾದಿ ಹಬ್ಬ ಸಹ ಆಚರಣೆಯಾಗಿದೆ. ಯುಗಾದಿ ಮತ್ತು ರಂಜಾನ್ ಎರಡೂ ಹಬ್ಬಗಳು ಒಟ್ಟೊಟ್ಟಿಗೆ ಬಂದಿದ್ದು, ಇಬ್ಬರು ಸಹೋದರತ್ವದಿಂದ ಬಾಳಬೇಕು ಎಂದು ಆ ದೇವರೇ ಒಟ್ಟಿಗೆ ಹಬ್ಬವನ್ನು ಕೊಟ್ಟಿದ್ದಾನೆ. ನಾವೆಲ್ಲರೂ ಅಣ್ಣ ತಮ್ಮಂದಿರಂತೆ ಬಾಳೋಣ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಅಡಿಷನಲ್ ಎಸ್ಪಿ ಅಬ್ದುಲ್ ಖಾದರ್, ಡಿವೈಎಸ್ಪಿ ಚಂದ್ರಶೇಖರ್ ಮತ್ತಿತರರು ಭಾಗವಹಿಸಿದ್ದರು.

– ಕೆ. ಬಿ.ಚಂದ್ರಚೂಡ

Leave a Reply

Your email address will not be published. Required fields are marked *

× How can I help you?